ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ : ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ರಕ್ಷಿತಾ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ : ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ  ರಕ್ಷಿತಾ ಆಯ್ಕೆ



ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್  ಅಥ್ಲೆಟಿಕ್ಸ್ ಗೆ  ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ  9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ.

  2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ  ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅವರು ಆಯ್ಕೆಯಾಗಿದ್ದಾರೆ.

ರಕ್ಷಿತಾ ಅವರ

ಕ್ರೀಡಾ ಸಾಧನೆ : 

2022-23 ನೇ ಸಾಲಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಅಥ್ಲೆಟಿಕ್ಸ್  ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಚಿನ್ನಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆದ್ದರು. 2023ರಲ್ಲಿ ಆಂದ್ರಪ್ರದೇಶದಲ್ಲಿ ನಡೆದ ದಕ್ಷಿಣ ಭಾರತ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.

Post a Comment

0 Comments