ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಗಣರಾಜ್ಯೋತ್ಸವ
ಮೂಡುಬಿದಿರೆ: ಪ್ರಜಾಪ್ರಭುತ್ವದ ಯಶಸ್ಸು ಸಾಮಾನ್ಯ ಜನರ ಕೈಯಲ್ಲಿದೆ. ಅದರಲ್ಲೂ ಯುವ ಜನರು, ವಿದ್ಯಾರ್ಥಿಗಳು, ತಮ್ಮ ಹೊಣೆಯನ್ನು ಅರಿತು ನಡೆಯಬೇಕು ಎಂದು ಉದ್ಯಮಿ ಧೀರಜ್ ಕುಮಾರ್ ಕೊಳಕೆ ಹೇಳಿದರು.
ಎಕ್ಸ
ಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ, ನಮ್ಮ ದೇಶವು ವಿವಿಧ ಜಾತಿ, ಧರ್ಮ, ಸಂಸ್ಕೃತಿಗಳನ್ನು ಒಳಗೊಂಡಿದ್ದು, ಪ್ರಜಾಪ್ರಭುತ್ವದ ಅಡಿಯಲ್ಲಿ ನಾವೆಲ್ಲರೂ ಒಂದೇ, ಅಲ್ಲದೇ ಏಕತೆಯ ಮಂತ್ರವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದರು.
ಶಾಲಾ ಆಡಳಿತ ನಿರ್ದೇಶಕ ಡಾ.ಬಿ.ಪಿ ಸಂಪತ್ ಕುಮಾರ್, ಪ್ರಾಂಶುಪಾಲೆ ದಿವ್ಯಾ ಎಸ್. ನಾಯಕ್, ಉಪ ಪ್ರಾಂಶುಪಾಲೆವಿಮಲಾ ಶೆಟ್ಟಿ ಉಪಸ್ಥಿತರಿದ್ದರು.
0 Comments