ಫೆ .9 : ಆಳ್ವಾಸ್ ವಿದ್ಯಾರ್ಥಿಗಳಿಂದ ಬೀದಿ ನಾಟಕದ ಮೂಲಕ ಜಾಗೃತಿ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ನಮೂಹ ಸಂಹವನ ವಿಭಾಗದ Advertising and PR ಮುಕ್ತ ಆಯ್ಕೆಯ (ಓಪನ್ ಇಲೆಕ್ಟಿವ್) ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯದ ಭಾಗವಾಗಿ ಕಸ ವಿಲೇವಾರಿ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಮೂಡುಬಿದಿರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕಿ ಸುಚಿತಾ ಎಂ ತಿಳಿಸಿದ್ದಾರೆ.
ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಮೂಡುಬಿದಿರೆಯ ಪುರಸಭೆಯ ಸಹಯೋಗದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವನ್ನು ಸ್ವರಾಜ್ಯ ಮೈದಾನದಲ್ಲಿ ಫೆ. 09ರಂದು ಸಂಜೆ 03:30ಕ್ಕೆ ಪುರಸಭಾ ಮುಖ್ಯಾಧಿಕಾರಿ ಇಂದು ಎಂ ಉದ್ಘಾಟಿಸಲಿದ್ದಾರೆ.
ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಕುಮಾರ್, ಪುರಸಭೆಯ ಪರಿಸರ ಅಭಿಯಂತರೆ ಶಿಲ್ಪಾ ಎಸ್, ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ಪುರಸಭಾ ಸದಸ್ಯರುಗಳಾದ ರಾಜೇಶ್ ನಾಯ್ಕ, ಶಕುಂತಲಾ ಹರೀಶ್ ದೇವಾಡಿಗ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯಾ ಕುರಿಯನ್ ಭಾಗವಹಿಸಲಿದ್ದಾರೆ.
ಬೀದಿ ನಾಟಕವನ್ನು ಆಳ್ವಾಸ್ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಸುಧೀಂದ್ರ ಶಾಂತಿ ನಿರ್ದೇಶಿಸಲಿದ್ದಾರೆ. ವಿದ್ಯಾರ್ಥಿಗಳ ತಂಡವು ನಗರದ ಮಾರ್ಕೆಟ್ ರೋಡ್ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಲಿದೆ.ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹಾಗೂ ಉಪನ್ಯಾಸಕ ವೃಂದ ನಮಗೆ ಮಾರ್ಗದರ್ಶನ ನೀಡಿದ್ದಾರೆ ಎಂದರು.
ಕಸ ವಿಲೇವಾರಿ ಹಾಗೂ ತ್ಯಾಜ್ಯ ನಿರ್ವಹಣೆ ಇತ್ತೀಚಿನ ದಿನಗಳಲ್ಲಿ ಬಹಳ ಸವಾಲಿನ ಕೆಲಸವೇ ಹೌದು. ಜನರಲ್ಲಿ ಈ ಕುರಿತು ಅರಿವು ಮೂಡಿಸಿದರೆ ವೈಜ್ಞಾನಿಕವಾಗಿ ನಿರ್ವಹಣೆ ಆಗದೇ ಇರುವ ತ್ಯಾಜ್ಯ ಹಾಗೂ ಅದರಿಂದಾಗುವ ದುಷ್ಪರಿಣಾಮಗಳನ್ನು ಕಡಿಮೆ ಮಾಡಬಹುದು. ಪುರಸಭೆಯನ್ನು ಮಾತ್ರವೇ ಇದಕ್ಕೆ ಹೊಣೆಯಾಗಿಸದೆ, ವಿದ್ಯಾವಂತರಾದ ವಿದ್ಯಾರ್ಥಿಗಳು ಪ್ರಯತ್ನವಿದು. ಕಾರ್ಯದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ
AD & PR (ಜಾಹಿರಾತು ಹಾಗೂ ಸಾರ್ವಜನಿಕ ಸಂಪರ್ಕ) ವಿಷಯವನ್ನು ಕಲಿಯುವ ವಿದ್ಯಾರ್ಥಿಗಳಿಗೆ ಒಂದು ಕಾರ್ಯಕ್ರಮವನ್ನು ಆಯೋಜನೆ ಮಾಡುವ ಹಾಗೂ ಸಾರ್ವಜನಿಕ ಸಂಪರ್ಕದಲ್ಲಿ ಜನರನ್ನು ಮನವೊಲಿಸುವ ಕೌಶಲ್ಯಗಳನ್ನು ಪ್ರಾಯೋಗಿಕವಾಗಿ ಕಲಿಯುವ ನಿಟ್ಟಿನಲ್ಲಿ ಈ ಬೀದಿನಾಟಕ ಹಮ್ಮಿಕೊಳ್ಳಲಾಗಿದೆ. ಪತ್ರಿಕಾ ಪ್ರಕಟಣೆ, ಜಾಹೀರಾತು, ಮಾಧ್ಯಮ ಸಂಪರ್ಕ, ಇವೆಂಟ್ ಮ್ಯಾನೇಜೈಂಟ್ ಹೀಗೆ ಒಂದು ಕಾರ್ಯಕ್ರಮ ಆಯೋಜನೆಗೆ ಬೇಕಾದ ಎಲ್ಲಾ ಹಂತಗಳನ್ನು ವಿದ್ಯಾರ್ಥಿಗಳೇ ನಡೆಸುತ್ತಾರೆ.
ಈ ಕಾರ್ಯಕ್ರಮದ ಯೋಜನೆಯಿಂದ ಹಿಡಿದು, ಆಯೋಜನೆಯವರೆಗೆ ವಿದ್ಯಾರ್ಥಿಗಳೇ ತೊಡಗಿಕೊಳ್ಳುವುದರಿಂದ ಕಲಿಕಾ ವಾತಾವರಣಕ್ಕೆ ಪೂರಕವಾಗಲಿದೆ. ಪತ್ರಿಕಾ ಗೋಷ್ಠಿ ನಡೆಸುವ ಪ್ರಾಯೋಗಿಕ ಚಟುವಟಿಕೆಯನ್ನು ಮೂಡುಬಿದಿರೆ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾ ಗೋಷ್ಠಿಯನ್ನೂ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಯೋಜಕರುಗಳಾದ ದರ್ಶಿತಾ ಶೆಟ್ಟಿ, ಸುದೀಕ್ಷಾ ಹೆಗ್ಡೆ, ಮೋನಿಷಾ ಉಪಸ್ಥಿತರಿದ್ದರು.
0 Comments