ನರೇಗಾ ದಿನಾಚರಣೆ: ಫಲಾನುಭವಿಗಳಿಗೆ ಪ್ರಶಂಸಾ ಪತ್ರ ವಿತರಣೆ

ಜಾಹೀರಾತು/Advertisment
ಜಾಹೀರಾತು/Advertisment

 ನರೇಗಾ ದಿನಾಚರಣೆ: ಫಲಾನುಭವಿಗಳಿಗೆ ಪ್ರಶಂಸಾ ಪತ್ರ ವಿತರಣೆ



ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಗ್ರಾಮ ಪಂಚಾಯತ್ ನಲ್ಲಿ  ಶುಕ್ರವಾರ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ "ನರೇಗಾ ದಿನ"ವನ್ನು  ಆಚರಿಸಲಾಯಿತು.


2023-24 ನೇ ಸಾಲಿನ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಯಲ್ಲಿ 100 ಮಾನವ ದಿನಗಳನ್ನು ಪೂರೈಸಿದ  ಫಲಾನುಭವಿಗಳಿಗೆ ಪ್ರಶಂಸಾ ಪತ್ರ ಹಾಗೂ ಸನ್ಮಾನಿಸಿ ಗೌರವಿಸಲಾಯಿತು.


100 ಮಾನವ ದಿನ ಗುರುತಿನ ಟಿ-ಶರ್ಟ್ ಹಾಗೂ ಕ್ಯಾಪ್ ನೀಡಲಾಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೆಸ್ ಡಿ'ಸೋಜಾ,  ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹುನಗುಂದ, ಐಇಸಿ ಸಂಯೋಜಕಿ ಅನ್ವಯ, ಪಂಚಾಯತ್ ಸಿಬ್ಬಂದಿಗಳಾದ ಪ್ರತಿಭಾ,ಯಶೋಧರಾ,ಅಕ್ಷಯ್,ವೈಷ್ಣವಿ, ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments