ಸಾರ್ವಜನಿಕ ಸತ್ಯನಾರಾಯಣ ಪೂಜೆ - ಸನ್ಮಾನ
ಮೂಡುಬಿದಿರೆ : ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ಹುಡ್ಕೋ ಕಾಲನಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಕಳೆದ ೨೨ ವರ್ಷಗಳಿಂದ ಪುರಸಭಾ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ದಾಮೋದರ ಸಫಲಿಗ ಅವರನ್ನು ಸಭಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾಲನಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ರಾಹುಲ್ ಪಿ ಹೆಗ್ಡೆ, ಸಾತ್ವಿಕ್ ಪೈ, ಪ್ರಶಾಂತ್ ಅವರಿಗೆ ಲಕ್ಷ್ಮೀ ಉಪಾದ್ಯಾಯ ಸ್ಮರಾಣಾರ್ಥ ವಿದ್ಯಾರ್ಥಿವೇತನ ನೀಡಲಾಯಿತು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸನ್ಮತ್ ಎಸ್ ಆಚಾರ್ಯ, ಇಂದರ್ ಆಚಾರ್ಯ, ಪ್ರಸಾದ್ ಹೆಗ್ಡೆ, ಶಂಕರ್ ಆಚಾರ್ಯ ಅವರನ್ನು ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಭಾಗವಹಿಸಿದರು. ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ, ಪುರಸಭಾ ಸದಸ್ಯೆ ರೂಪ ಸಂತೋಷ್ ಶೆಟ್ಟಿ, ಹುಡ್ಕೋ ಕಾಲೋನಿ ನಿವಾಸಿಗಳ ಸಂಘದ ಅಧ್ಯಕ್ಷ ಸುನಿಲ್ ಕುಮಾರ್, ಬಾಂಧವ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರಶ್ಮಿತ್ ಶೆಟ್ಟಿ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಬಿ.ಸೀತಾರಾಮ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದಿಂದ ಭಕ್ತಿಗಾನ ಸುಧಾ ನಡೆಯಿತು.
0 Comments