ನಾಳೆ ಮೂಡುಬಿದಿರೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಮೂಡುಬಿದಿರೆ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ನಾಳೆ ಮೂಡುಬಿದಿರೆಯಲ್ಲಿ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ.
ಖ್ಯಾತ ರಂಗಕರ್ಮಿ ಹಾಗೂ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಪತಿ ಮಂಜನಬೈಲು ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಮೂಡುಬಿದಿರೆ ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಆಶಯ ನುಡಿಗಳನ್ನಾಡಲಿದ್ದಾರೆ. ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಶುಭಾಶಂಸನೆಗೈಯ್ಯಲಿದ್ದಾರೆ.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಆಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಈಶ್ವರ ಭಟ್, ಉದ್ಯಮಿ ಶ್ರೀಪತಿ ಭಟ್, ಚೌಟರ ಅರಮನೆಯ ಕುಲದೀಪ್ ಎಂ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಎಸ್.ಕೆ.ಎಫ್.ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ರಾಮಕೃಷ್ಣ ಆಚಾರ್, ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಮತ್ತಿತರರು ಭಾಗವಹಿಸಲಿದ್ದಾರೆ.
ಇದಕ್ಕೂ ಮೊದಲು ಮೂಡುಬಿದಿರೆ ತಹಶೀಲ್ದಾರ್ ಮುಕುಲ್ ಜೈನ್ ರಾಷ್ಟ್ರ ಧ್ವಜವನ್ನು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಕನ್ನಡ ಧ್ವಜವನ್ನು ಡಾ.ಎಂ.ಮೋಹನ ಆಳ್ವ ಆರೋಹಣಗೈಯಲಿದ್ದಾರೆ. ಎಸ್.ಕೆ.ಎಫ್.ನ ಅಧ್ಯಕ್ಷ ಡಾ.ರಾಮಕೃಷ್ಣ ಆಚಾರ್ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.
ಮೂಡುಬಿದಿರೆ ತಾಲೂಕು ಘಟಕದ ಕ.ಸಾ.ಪ. ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಕೆ.ಉಪಸ್ಥಿತರಿರುವರು.
0 Comments