ಮಂಗಳೂರಿನ NITK ಹಾಸ್ಟೆಲ್ ಉದ್ಘಾಟಿಸಿದ ಪ್ರಧಾನಿ ಮೋದಿ:ದೀಪ ಬೆಳಗಿಸಿ ಚಾಲನೆ ನೀಡಿದ ಸಂಸದ ಕಟೀಲ್
ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಂಗಳೂರಿನ ಸುರತ್ಕಲ್‌ನಲ್ಲಿರುವ NITK ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಮೂರು ಹೊಸ ಅತ್ಯಾಧುನಿಕ ವಿದ್ಯಾರ್ಥಿಗಳ ವಸತಿ ನಿಲುವನ್ನು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದರು.
137 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ವಸತಿ ನಿಲಯದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಿದ್ದು NITK ಕ್ಯಾಂಪಸ್ ನಲ್ಲಿ ನಡೆದ ಕಾರ್ಯಕ್ರಮವನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲುರವರು ದೀಪ ಬೆಳಗಿಸಿ ಉದ್ಘಾಟಿಸಿ ವಿಶ್ವವಿದ್ಯಾಲಯದ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದರು.
0 Comments