ದ.ಕ.ಲೋಕಸಭಾ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟ, ಉಡುಪಿಗೆ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ
ಮೂಡುಬಿದಿರೆ: ದ.ಕ.ಜಿಲ್ಲಾ ಲೋಕಸಭಾ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ.
ಮಾಜಿ ಯೋಧ, ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿದ್ದ ಯುವ ನಾಯಕ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಿದ್ದರಿಂದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಗ್ರಾ.ಪಂ.ಸದಸ್ಯನಾಗಿ, ಅಧ್ಯಕ್ಷನಾಗಿ, ತಾ.ಪಂ.ಸದಸ್ಯನಾಗಿ ಆಯ್ಕೆಯಾಗುವ ಮೂಲಕ ಕೆಳಹಂತದಿಂದಲೇ ರಾಜಕೀಯವಾಗಿ ಪಳಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಮೂರು ಬಾರಿ ಸಚಿವರಾಗಿ, ಎರಡು ಬಾರಿ ಪ್ರತಿ ಪಕ್ಷದ ನಾಯಕನಾಗಿ ಒಟ್ಟು ಐದು ಬಾರಿ ಕ್ಯಾಬಿನೆಟ್ ಸ್ಥಾನಮಾನವನ್ನು ಗಳಿಸಿರುವ ಕೋಟ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿದ್ದರು.
0 Comments