ಮೂಡುಬಿದಿರೆ: ಪೋಲಿಯೋ ಲಸಿಕಾ ಅಭಿಯಾನ

ಜಾಹೀರಾತು/Advertisment
ಜಾಹೀರಾತು/Advertisment

ಮೂಡುಬಿದಿರೆ: ಪೋಲಿಯೋ ಲಸಿಕಾ ಅಭಿಯಾನ



ಮೂಡುಬಿದಿರೆ: ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರೋಟರಿ ಕ್ಲಬ್ ಮೂಡುಬಿದಿರೆ ಸಹಯೋಗದಲ್ಲಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಯಿತು.

   ಶಾಸಕ ಉಮಾನಾಥ ಎ.ಕೋಟ್ಯಾನ್ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

   ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ., ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಕ್ಷತಾ ನಾಯಕ್, ಮಕ್ಕಳ ತಜ್ಞರಾದ ಡಾ.ಮುರಳೀಕೃಷ್ಣ, ಡಾ.ವಸಂತ್, ಹಿರಿಯ ಆರೋಗ್ಯ ಮೇಲ್ವೀಚಾರಕಿ ಶಾಂತಮ್ಮ ಹಾಗೂ ರೋಟರಿ ಕ್ಲಬ್ ಸದಸ್ಯರು ಈ ಸಂದರ್ಭದಲ್ಲಿದ್ದರು.

 ಕಲ್ಲಬೆಟ್ಟು: ಲಸಿಕಾ ಅಭಿಯಾನ


ಕಲ್ಲಬೆಟ್ಟು ಶಾಲೆಯಲ್ಲಿ ವಾಡ್೯ ಸದಸ್ಯ ಜೊಸ್ಸಿ ಮಿನೇಜಸ್ ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆಯನ್ನು ನೀಡಿದರು.

  ಕಲ್ಲಬೆಟ್ಟು ಸಮುದಾಯ ಆರೋಗ್ಯ ಅಧಿಕಾರಿ ಸೋಮನಾಥ, ಅಂಗನವಾಡಿ ಕಾರ್ಯಕರ್ತೆಯರಾದ ರೇಖಾ, ಶಕುಂತಳಾ, ನಿವೃತ್ತ ಕಿರಿಯ ಆರೋಗ್ಯ ಸಹಾಯಕಿ ಗಿರಿಜಾ ಹಾಗೂ ಸ್ತ್ರೀ ಶಕ್ತಿ ಸದಸ್ಯೆ ಪ್ರೀತಿ ಉಪಸ್ಥಿತರಿದ್ದರು.

Post a Comment

0 Comments