ಹಿರಿಯ ಕಂಬಳ ವಿದ್ವಾಂಸ ಗುಣಪಾಲ ಕಡಂಬರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ
ಮೂಡುಬಿದಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ಕಂಬಳ ವಿದ್ವಾಂಸ, ಕಂಬಳ ಅಕಾಡೆಮಿಯ ಸಂಸ್ಥಾಪಕ ಸಂಚಾಲಕ, ಮೂಡುಬಿದಿರೆ ಜೈನ ಪ.ಪೂ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಗುಣಪಾಲ ಕಡಂಬ ಅವರು ಬೆಂಗಳೂರಿನ ದಕ್ಷಿಣ ಕನ್ನಡ ಜೈನ ಮೈತ್ರಿಕೂಟ ಕೊಡ ಮಾಡುವ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಮೈತ್ರಿಕೂಟದ ಸ್ಥಾಪಕಾಧ್ಯಕ್ಷ ಡಿ.ಸುರೇಂದ್ರ ಕುಮಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಮಾ.10ರಂದು ಬೆಂಗಳೂರಿನ ಬಸವನಗುಡಿಯಲ್ಲಿ ನಡೆಯಲಿದೆ.
ದಸರಾ ಪ್ರಶಸ್ತಿ ಪುರಸ್ಕೃತರಾಗಿರುವ ಗುಣಪಾಲ ಕಡಂಬ
ಅವರು ಶಿಕ್ಷಣದ ಜತೆ ಜತೆಗೆ ಕಂಬಳ ಕ್ಷೇತ್ರದಲ್ಲಿ ಸಂಘಟಕರಾಗಿ, ಪ್ರದಾನ ತೀರ್ಪುಗಾರರಾಗಿ, ಜಿಲ್ಲಾ ಹಾಗೂ ಮೂಡುಬಿದಿರೆ ಕಂಬಳ ಸಮಿತಿಗಳಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.
0 Comments