ಆಳ್ವಾಸ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್ ಆರಂಭ

ಜಾಹೀರಾತು/Advertisment
ಜಾಹೀರಾತು/Advertisment

 ಆಳ್ವಾಸ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್ ಆರಂಭ

 *ಸಾಧನಾ ಕೋಚಿಂಗ್ ಸೆಂಟರ್ ಜತೆ ಒಪ್ಪಂದ

ಮೂಡುಬಿದಿರೆ:  ಯುಪಿಎಸ್‌ಸಿ, ಐಎಎಸ್, ಐಪಿಎಸ್, ಕೆಪಿಎಸ್‌ಸಿ ಸೇರಿದಂತೆ ಪ್ರಮುಖ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ನೀಡುವ ಬೆಂಗಳೂರಿನ ವಿಜಯನಗರದ ಸಾಧನಾ ಕೋಚಿಂಗ್ ಸೆಂಟರ್ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್ ನ್ನು ಈ ವರ್ಷದಿಂದಲೇ ಪ್ರಾರಂಭಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು.

  ಅವರು ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಪದವಿ ಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಆರು ತಿಂಗಳ ಫೌಂಡೇಶನ್ ಕೋರ್ಸ್, ಪದವಿ ವಿದ್ಯಾರ್ಥಿಗಳಿಗೆ 3 ವರ್ಷದ ಸಮಗ್ರ ಕೋಚಿಂಗ್ ಮತ್ತು ಪದವಿ ನಂತರದ ವಿದ್ಯಾರ್ಥಿಗಳಿಗೆ 9 ತಿಂಗಳ ದೀರ್ಘಕಾಲಿನ ಕೋಚಿಂಗ್ ವ್ಯವಸ್ಥೆಯನ್ನು ಕಲ್ಪಿಸಲಿದೆ.


2011ರಲ್ಲಿ ಜ್ಯೋತಿ ಅವರು ಸಾಧನಾ ಕೋಚಿಂಗ್ ಅನ್ನು ಬೆಂಗಳೂರಿನಲ್ಲಿ ಆರಂಭಿಸಿದ್ದು, ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ನೀಡಿರುತ್ತದೆ. ನೀತಿ ಆಯೋಗದ ಸಹಕಾರದಲ್ಲಿ ಯಾದಗಿರಿಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಯಶಸ್ವಿಯಾಗಿದೆ. ರಾಜ್ಯದ ವಿವಿಧೆಡೆಯ ಕೊಳಗೇರಿ, ಆರ್ಥಿಕ ಹಾಗೂ ಸಾಮಾಜಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಸಾಧನೆ ಮಾಡಿದೆ.


ಶೈಕ್ಷಣಿಕ ಕ್ಷೇತ್ರದ ವಿವಿಧ ಮಜಲುಗಳಲ್ಲಿ ಸಾಧನೆ ಮಾಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಇದೀಗ ಸಾಧನಾ ಕೋಚಿಂಗ್ ಸೆಂಟರ್ ಜತೆ ಒಪ್ಪಂದ ಮಾಡಿಕೊಂಡಿದೆ.

 ಸಾಧನಾ ಕೋಚಿಂಗ್ ಸೆಂಟರ್ ನ ಸಂಸ್ಥಾಪಕಿ ಡಾ.ಜ್ಯೋತಿ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಪ.ಪೂ.ಕಾಲೇಜಿನ ಪ್ರಾಂಶುಪಾಲ ಮಹಮ್ಮದ್ ಸದಾಕತ್, ಡೀನ್ ಪ್ರಶಾಂತ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Post a Comment

0 Comments