ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 22ನೇ ಘಟಿಕೋತ್ಸವ : 2023 ವಿದ್ಯಾರ್ಥಿಗಳಿಂದ ಪದವಿ ಸ್ವೀಕಾರ

ಜಾಹೀರಾತು/Advertisment
ಜಾಹೀರಾತು/Advertisment

 ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ  22ನೇ  ಘಟಿಕೋತ್ಸವ : 2023 

ವಿದ್ಯಾರ್ಥಿಗಳಿಂದ ಪದವಿ ಸ್ವೀಕಾರ  

ಮೂಡುಬಿದಿರೆ: ಇಲ್ಲಿನ ವಿದ್ಯಾಗಿರಿಯ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಶನಿವಾರ ನಡೆದ ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ  22ನೇ  ಘಟಿಕೋತ್ಸವದಲ್ಲಿ  2023-24 ನೇ ವರ್ಷದ  10 ವಿಭಾಗಗಳ   2,023 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು.

ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷ ಪ್ರೊ.ಟಿ. ಜಿ. ಸೀತಾರಾಮ್ ಅವರು ಪದವಿ ಪ್ರದಾನ ಮಾಡಿ ಮಾತನಾಡಿ  'ವಿದ್ಯಾರ್ಥಿಗಳಿಗೆ ಪ್ರಾದೇಶಿಕ ಭಾಷೆಯಲ್ಲೇ  ಶಿಕ್ಷಣ ನೀಡಿ, ಅವರ ಭಾಷೆಯಲ್ಲೇ ಸಂವಹನ ನಡೆಸಿ. ಅವರ ಯೋಚನಾ ಸಾಮರ್ಥ್ಯ ಹಾಗೂ ಆತ್ಮ ವಿಶ್ವಾಸ ಹೆಚ್ಚಿಸಿ ಎಂದು ಕರೆ ನೀಡಿದರು.


ಪ್ರಾದೇಶಿಕ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಕಾರ್ಯವನ್ನು ಎಐಸಿಟಿಇ ಆರಂಭಿಸಿದೆ. ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಆರಂಭಿಸಿದೆ ಎಂದರು.

ನಾವು ಜಗತ್ತಿಗೆ ಶೂನ್ಯದಿಂದ ಪ್ಲಾಸ್ಟಿಕ್ ಸರ್ಜರಿ ತನಕದ ವಿದ್ಯೆ ನೀಡಿದ್ದೇವೆ. 'ಭಾರತೀಯ' ಎಂಬ ಹೆಮ್ಮೆ ಇರಲಿ ಎಂದ ಅವರು, ಶಾಲೆಗೆ ಸೇರಿದ100 ರಲ್ಲಿ 28 ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಇದು ಶೇಕಡಾ 50 ಕ್ಕೆ ಹೆಚ್ಚಬೇಕು ಎಂದರು.

100 ಕ್ಕೆ 100 ಅಂಕ ಪಡೆಯುವುದೇ ಸಾಧನೆಯಲ್ಲ. ವಿಮರ್ಶಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಿ. ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು.ಮಾನವೀಯ ಮೌಲ್ಯ ಹಾಗೂ ಪರಿಶ್ರಮ ನಿಮ್ಮನ್ನು ಬೆಳೆಸುತ್ತದೆ ಎಂದರು.

 ಮಂಗಳೂರು ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗಳ ವ್ಯಾಪ್ತಿಗೆ  ಕಾಲೇಜುಗಳು ಒಳಪಟ್ಟಿವೆ.


ಎಐಸಿಟಿಇ ಅಧ್ಯಕ್ಷ ಪ್ರೊ.ಟಿ. ಜಿ. ಸೀತಾರಾಮ್ ಅವರ ಪತ್ನಿ ಅನುರಾಧಾ ಸೀತಾರಾಮ್ , ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ,  ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ.ವಿನಯ್ ಆಳ್ವ, ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ಆಳ್ವಾಸ್ ನರ್ಸಿಂಗ್  ಕಾಲೇಜು, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು , ಆಳ್ವಾಸ್ ಪ್ರಕೃತಿ  ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು, ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜು, ಆಳ್ವಾಸ್ ಸಂಯುಕ್ತ ಆರೋಗ್ಯ ವಿಜ್ಞಾನಗಳ ಕಾಲೇಜು, ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಆಳ್ವಾಸ್ ಪದವಿ ಕಾಲೇಜು, ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಪ್ರಾಂಶುಪಾಲರುಗಳು ಇದ್ದರು.

ಆಳ್ವಾಸ್ ಸಾಂಸ್ಕೃತಿಕ ತಂಡದ ಸದಸ್ಯರು ಪ್ರಾರ್ಥನೆ ಹಾಡಿದರು.ಉಪನ್ಯಾಸ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಪದವಿ ಘೋಷಣೆ ಮಾಡಿದರು.

Post a Comment

0 Comments