ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬದುಕೇ ಭಾರತೀಯರಿಗೆ ಸ್ಪೂರ್ತಿ-ಕೋಟ
ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಜರಗಿದ ಎಸ್.ಟಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಲ್ಲಿ ಆಚರಣೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿಯವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಭಾರತದ ಜನಜೀವನಕ್ಕೆ ಮತ್ತು ಭಾರತೀಯತೆಗೆ ಸ್ಪೂರ್ತಿ ಎಂದು ಪ್ರಶಂಸಿದರು.
ಭಾರತದ ಪ್ರಧಾನಮಂತ್ರಿಯವರ ಮಾರ್ಗದರ್ಶನದಲ್ಲಿ ಅಂಬೇಡ್ಕರ್ ಅವರು ಜಗತ್ತಿನಲ್ಲಿ ಸಂಚರಿಸಿದ ಐದು ದೇಶಗಳಲ್ಲಿ ಪಂಚತೀರ್ಥ ಎಂದು ಪರಿಗಣಿಸಿ ಆ ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸುವ ಆ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುವ ಕಾರ್ಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಬಲಪಡಿಸುವುದೇ ಬಿಜೆಪಿಯ ಉದ್ದೇಶವಾಗಿದೆ. ಇದನ್ನು ಅರ್ಥೈಸಿಗೊಲ್ಲದ ಕಾಂಗ್ರೆಸಿಗರು ವಿನಾಕಾರಣ ರಾಜಕೀಯ ಉದ್ದೇಶಕ್ಕಾಗಿ ಬಿಜೆಪಿಯನ್ನು ಟೀಕೆ ಮಾಡುವ ಹಂತದಲ್ಲಿ ಹಂತದಲ್ಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಸಮಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಇರುವ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿಯ 15% ಇರುವ ಮೀಸಲಾತಿಯನ್ನು 17% ಕ್ಕೆ ಏರಿಸಲಾಗಿದೆ. ಈಗಾಗಲೇ ಅನುಷ್ಠಾನಗೊಳಿಸಲಾಗಿದೆ. 75 ವರ್ಷಗಳಿಂದ ನಡೆಯುತ್ತಿರುವ ಈ ಮೀಸಲಾತಿ ಗೊಂದಲವನ್ನು ಬಗೆಹರಿಸಿ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದು ಭಾರತೀಯ ಜನತಾ ಪಾರ್ಟಿ ಅನ್ನೋದನ್ನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮನವರಿಕೆ ಮಾಡಿಕೊಂಡು ಈ ಬಾರಿಯ ಚುನಾವಣೆಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಂತ್ರಿ ಮಾಡಬೇಕಾಗಿ ವಿನಂತಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಡಬೇಕಾಗಿ ಮನವಿ ಮಾಡುತ್ತೇನೆ ಎಂದು ಕೋಟ ತಿಳಿಸಿದರು.
0 Comments