ಜಯಪ್ರಕಾಶ್ ಹೆಗ್ಡೆಗೆ ಆರಂಭದಲ್ಲೇ ಆಘಾತ:ಬಿಜೆಪಿ ಅಭ್ಯರ್ಥಿ ಕೋಟಾಗೆ ಕಾಂಗ್ರೆಸ್ ನಾಯಕರಿಂದಲೇ ದೇಣಿಗೆ

ಜಾಹೀರಾತು/Advertisment
ಜಾಹೀರಾತು/Advertisment

 ಜಯಪ್ರಕಾಶ್ ಹೆಗ್ಡೆಗೆ ಆರಂಭದಲ್ಲೇ ಆಘಾತ:ಬಿಜೆಪಿ ಅಭ್ಯರ್ಥಿ ಕೋಟಾಗೆ ಕಾಂಗ್ರೆಸ್ ನಾಯಕರಿಂದಲೇ ದೇಣಿಗೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.  ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪಕ್ಷವನ್ನು ಸಮನ್ವಯತೆಗೆ ತರಲು ಒದ್ದಾಡುತ್ತಿದ್ದಾರೆ.


ಈ ಮಧ್ಯೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸೀತಾರಾಮ್ ಲಕ್ಕೊಳ್ಳಿ ಬಿಜೆಪಿ ಅಭ್ಯರ್ಥಿ ಪೂಜಾರಿಯವರಿಗೆ 25000 ರೂಪಾಯಿ ದೇಣಿಗೆ ನೀಡಿದ್ದಾರೆ.


ತರೀಕೆರೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಚೆಕ್‌ ಮೂಲಕ ದೇಣಿಗೆ ರವಾನೆಯಾಗಿದ್ದು ಇದನ್ನು ಕೋಟ ಶ್ರೀನಿವಾಸ ಪೂಜಾರಿಯವರಿಗೆ ತಲುಪಿಸಿ ಎಂದು ಹೇಳಿಕೊಂಡಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಚೆಕ್ ಹಸ್ತಾಂತರಿಸಲಾಯಿತು.

Post a Comment

0 Comments