ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರ ರಣೋತ್ಸಾಹ-ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳಲು ಮುಂದಾದ ಬಿಜೆಪಿ
ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಹತಾಶರಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಈ ಬಾರಿ ರಣೋತ್ಸಾಹದಲ್ಲಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗೆ ಲೀಡ್ ತಂದುಕೊಡುವ ಪ್ರತಿಜ್ಞೆ ಮಾಡಿದ್ದಾರೆ.
ಉಡುಪಿಗೆ ಹೋಲಿಸಿದರೆ ಚಿಕ್ಕಮಗಳೂರು ಜಿಲ್ಲೆಯ ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿಯೇ ಇದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವ್ಯಾಮೋಹದ ಸವಾಲುಗಳ ನಡುವೆಯೂ ಇಲ್ಲಿ ಬಿಜೆಪಿ ಭಾರೀ ಅಂತರದ ಮತಗಳನ್ನು ಪಡೆಯಲೇಬೇಕು ಎಂಬ ಹಠಕ್ಕೆ ಬಿದ್ದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ಸೋತಿತ್ತು.
0 Comments