ವಿದ್ಯಾರ್ಥಿನಿಯನ್ನು ಬಲಿ ಪಡೆದುಕೊಂಡ ಮೆದುಳು ಜ್ವರ

ಜಾಹೀರಾತು/Advertisment
ಜಾಹೀರಾತು/Advertisment

 ವಿದ್ಯಾರ್ಥಿನಿಯನ್ನು ಬಲಿ ಪಡೆದುಕೊಂಡ ಮೆದುಳು ಜ್ವರ

ಮೂಡುಬಿದಿರೆ: ತಾಲೂಕಿನ ಶಿರ್ತಾಡಿಯ  ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಮೆದುಳು ಜ್ವರಕ್ಕೆ ಬಲಿಯಾದ ಘಟನೆ  ಭಾನುವಾರ ನಡೆದಿದೆ.


  ವಾಲ್ಪಾಡಿ ನಿವಾಸಿ ಸತೀಶ್ ಶೆಟ್ಟಿ ಅವರ ಪುತ್ರಿ ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ ನ 10 ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ(15) ಮೆದುಳು ಜ್ವರಕ್ಕೆ ಬಲಿಯಾದಾಕೆ. ಮೆದುಳು ಜ್ವರ ಉಲ್ಬಣಗೊಂಡ ಪರಿಣಾಮವಾಗಿ ಚಿಕಿತ್ಸೆಗಾಗಿ ಆಕೆಯನ್ನು ಮಂಗಳೂರಿನ  ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. 

ತ್ರೋಬಾಲ್ ಆಟಗಾರ್ತಿಯಾಗಿದ್ದ ಈಕೆ ಉತ್ತಮ ನೃತ್ಯಪಟುವಾಗಿದ್ದರು. 

 ಈಕೆಯ ತಂದೆ  ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿದೊದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ.  ಪ್ರಸ್ತುತ ಮೂಡುಬಿದಿರೆಯಲ್ಲಿ ನೆಲೆಸಿದ್ದಾರೆ.

Post a Comment

0 Comments