ತಾಯಿಯ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಲು ಹೊರಟ ಕೋಟ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಚುನಾವಣೆಗೆ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಲಿದ್ದು ಇದಕ್ಕೂ ಮುನ್ನ ಅವರ ತಾಯಿ ಲಚ್ಚಿ ಪೂಜಾರ್ತಿಯವರ ಆಶೀರ್ವಾದ ಪಡೆದುಕೊಂಡರು.
ಆನೆಗುಡ್ಢ ಮಹಾಗಣಪತಿ ದೇವಸ್ಥಾನ, ಕೋಟ ಅಮೃತೇಶ್ವರಿ ದೇವಸ್ಥಾನ, ಕಚ್ಚೂರು ಮಾಲ್ತೀದೇವಿ ದೇವಸ್ಥಾನ ಹಾಗೂ ಇತರೆ ದೇವಸ್ಥಾನ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರನ್ನು ಭೇಟಿಯಾಗಿ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.
0 Comments