ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಪದ್ಮರಾಜ್ "ರೋಡ್ ಶೋ"
ಮೂಡುಬಿದಿರೆ : ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಶುಕ್ರವಾರ ಸಂಜೆ ಮೂಡುಬಿದಿರೆಯಲ್ಲಿ "ರೋಡ್ ಶೋ" ನಡೆಸಿದರು.
ಮೂಡುಬಿದಿರೆ ಸಮಾಜ ಮಂದಿರದಿಂದ ಹನುಮಂತ ದೇವಸ್ಥಾನವರೆಗೆ ರೋಡ್ ಶೋ ನಡೆಸಿದ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರಿಗೆ ಪೂಜೆ ಸಲ್ಲಿಸಿದರು.
ಹಿಂತಿರುಗಿ ಬರುವ ಸಂದರ್ಭದಲ್ಲಿ ಅಂಗಡಿಗಳಿಗೆ, ಆಟೋ ಪಾಕ್ ೯ಗಳಿಗೆ ಭೇಟಿ ನೀಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷ ಕೆ.ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ನ ಮೂಡುಬಿದಿರೆ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ವಿಧಾನ ಸಭಾ ಕ್ಷೇತ್ರದ ವೀಕ್ಷಕ ವಸಂತ ಬೆರ್ನಾಡ್, ಪ್ರಚಾರ ಸಮಿತಿಯ ಉಸ್ತುವಾರಿ ಜೊಸ್ಸಿ ಮಿನೇಜಸ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ವೀಕ್ಷಕ ಸುರೇಶ್ ಕೋಟ್ಯಾನ್, ಪುರಸಭಾ ಸದಸ್ಯರಾದ ಕೊರಗಪ್ಪ, ಸುರೇಶ್ ಪ್ರಭು, ಇಕ್ಬಾಲ್ ಕರೀಂ,ಹಾಗೂ ಮುಖಂಡರಾದ ಚಂದ್ರಹಾಸ ಸನಿಲ್, ರಾಜೇಶ್ ಕಡಲಕೆರೆ ಮತ್ತಿತರರು ಭಾಗವಹಿಸಿದ್ದರು.
0 Comments