ದ್ವಿತೀಯ ಪಿಯುಸಿ ಫಲಿತಾಂಶ : ಎಕ್ಸಲೆಂಟ್ ನ ಗುಣಸಾಗರ್ ಜಿಲ್ಲೆಗೆ ಪ್ರಥಮ
ಮೂಡುಬಿದಿರೆ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಗುಣಸಾಗರ್ ಡಿ. ವಿಜ್ಞಾನ ವಿಭಾಗದಲ್ಲಿ 597 ಅಂಕಗಳನ್ನು ಗಳಿಸುವ ಮೂಲಕ ದ.ಕ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ರಾಜ್ಯದಲ್ಲಿ 2ನೇ ರ್ಯಾಂಕ್ ಗಳಿಸುವ ಮೂಲಕ ರಾಜ್ಯಮಟ್ಟದ ಟಾಪ್ 10ರ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾನೆ.
---
ಅರ್ಟಿಫಿಶಿಯಲ್ ಇಂಟೆಲಿಜೆನ್ಸಿ ಮುಂದುವರಿಸುವಾಸೆ: ಗುಣಸಾಗರ ಡಿ.
ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿರುವ ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿ ಗುಣಸಾಗರ ಡಿ. ಅವರು ಅರ್ಟಿಫಿಶಿಯಲ್ ಇಂಟೆಲಿಜೆನ್ಸಿ ಸಾಪ್ಟವೇರ್ ಕ್ಷೇತ್ರದಲ್ಲಿ ಅಧ್ಯಯನ ಮಾಡಿ, ಉದ್ಯೋಗ ಆಕಾಂಕ್ಷೆ ಪಡೆದಿರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
್ಲ ತುಮಕೂರು ಜಿಲ್ಲೆಯ ತಿಪಟೂರಿನ ಪತ್ರಕರ್ತ ದಯನ0ದ ಟಿ.ಎಸ್ ಮತ್ತು ಗೃಹಿಣಿ ಸವಿತಾ ಅವರ ಪುತ್ರನಾಗಿರುವ ಈತ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.91, ಪ್ರಥಮ ಪಿಯುಸಿಯಲ್ಲಿ ಶೇ.97 ಪಡೆದಿದ್ದು, ದ್ವಿತೀಯ ಪಿಯುಸಿಯಲ್ಲಿ 597 ಅಂಕಗಳೊAದಿಗೆ ಸಾಧನೆ ಮಾಡಿದ್ದಾರೆ. ತರಗತಿಯ ಕಲಿಕೆಯನ್ನು ಹೊರತುಪಡಿಸಿ 8 ಗಂಟೆಗಳ ಕಾಲ ವ್ಯಾಸಂಗ ಮಾಡಿದ್ದೇನೆ. ಎಕ್ಸಲೆಂಟ್ ಸಂಸ್ಥೆಯಲ್ಲಿನ ಕಲಿಕೆಗೆ ಪೂರಕವಾದ ವಾತಾವರಣ, ಸ್ಟಡಿ ಮೆಟಿರೀಯಲ್‌ಗಳು ಉತ್ತಮವಾಗಿದ್ದು, ಉತ್ತಮ ಅಂಕಗಳಿಸಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.
0 Comments