ಮೂಡುಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಲಕ್ಷ್ಮಣ್ ಸುವರ್ಣ ಪೆರಿಬೆಟ್ಟು ಆಯ್ಕೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ಬಿ,ಸಿ ಟ್ರಸ್ಟ್ ಮೂಡುಬಿದಿರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮೂಡುಬಿದಿರೆ ಇದರ ಆಶ್ರಯದಲ್ಲಿ ನಡೆದ ಭಜನಾ ಪರಿಷತ್ ಮಹಾಸಭೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು.
ಸಭೆಯನ್ನು ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಉದ್ಘಾಟಿಸಿ ಮಾರ್ಗದರ್ಶನ ನೀಡಿದರು.ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಶ್ರೀಮತಿ ಸುನೀತಾ ಹಾಗೂ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು ಮಾಹಿತಿ ನೀಡಿದರು.ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.ನಿಕಟ ಪೂರ್ವ ಪದಾಧಿಕಾರಿಗಳು,ಎಲ್ಲಾ ವಲಯಗಳ ಪದಾಧಿಕಾರಿಗಳು, ಮೇಲ್ವಿಚಾರಕರುಗಳು, ಕೃಷಿ ಅಧಿಕಾರಿ ಗಳು ಉಪಸ್ಥಿತರಿದ್ದರು.
ಶ್ರೀಮತಿ ವೀಣಾ ಸ್ವಾಗತಿಸಿ, ವಿಠಲರವರು ವಂದಿಸಿದರು ಶ್ರೀಮತಿ ಶಿವಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.
0 Comments