ದವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ನೆಟ್ ಬಾಲ್ ಟೂರ್ನಮೆಂಟ್ ಗೆ ಚಾಲನೆ
ಮೂಡುಬಿದಿರೆ: ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಪುರುಷರ ಹಾಗೂ ಮಹಿಳೆಯರ ವಿಭಾಗದ ನೆಟ್ ಬಾಲ್ ಟೂರ್ನಮೆಂಟ್ ಗುರುವಾರ ಧವಲಾ ಕಾಲೇಜಿನಲ್ಲಿ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ ಟೂರ್ನಮೆಂಟನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಗಳು ನಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಉತ್ತಮ ಕ್ರೀಡಾಪಟುಗಳಿಗೆ ಉತ್ತಮ ಉದ್ಯೋಗವಕಾಶಗಳಿವೆ ಎಂದು ಹೇಳಿದರು.
ಮಂಗಳೂರು ವಿವಿ ಮಟ್ಟದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪ್ರಥಮ ಸಮ್ಮೇಳನವನ್ನು ನಡೆಸಿದ್ದ ಧವಳಾ ಕಾಲೇಜು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿದ್ದು, ವಿವಿಯ ಕ್ರೀಡಾ ಸಾಧನೆಗೆ ಉತ್ತಮ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದರು.
ಎಸ್‌ಎಂಡಿಜೆವಿ ಸಂಘದ ಕಾರ್ಯದರ್ಶಿ ಅಭಿಜಿತ್ ಎಂ. ಅಧ್ಯಕ್ಷತೆ ವಹಿಸಿದರು.
ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ. ಎಂ.ರವೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗಳು ಕೂಡ ಮುಖ್ಯ. ಕ್ರೀಡೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸಾಧನೆ ಮಾಡುವಂತೆ ತಿಳಿಸಿದರು. ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಶಾಂತಿರಾಜ ಕಾಂಬ್ಳಿ
ಕ್ರೀಡಾ ಸಾಧಕ ಹಳೆ ವಿದ್ಯಾರ್ಥಿಗಳಾದ ಅಮ್ರೀನ್, ಕಿರಣ್ ಹಾಗೂ ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ದೈಹಿಕ ನಿರ್ದೇಶಕ, ಏಕಲವ್ಯ ಪ್ರಶಸ್ತಿ ಪುರಸ್ಕೃತ ನಿತಿನ್ ಅವರನ್ನು ಸನ್ಮಾನಿಸಲಾಯಿತು. ಎಡಪದವು ವಿವೇಕಾನಂದ ಕಾಲೇಜಿನ ದೈಹಿಕ ನಿರ್ದೇಶಕ ಪ್ರೇಮನಾಥ ಶೆಟ್ಟಿ, ಪಂದ್ಯಾಟದ ಕ್ರೀಡಾ ವೀಕ್ಷಕರಾದ ಜಯಭಾರತಿ, ವಿದ್ಯಾರ್ಥಿ ನಾಯಕ ಅನಿಖೇತ್ ಬಲ್ಲಾಳ್, ಖುಷಿ ಶೆಟ್ಟಿ, ಸಂತೋಷ್ ಉಪಸ್ಥಿತರಿದ್ದರು.
ಪ್ರಾಚಾರ್ಯ ಪ್ರೊ.ಪಾರ್ಶ್ವನಾಥ ಅಜ್ರಿ ಸ್ವಾಗತಿಸಿದರು. ಉಪನ್ಯಾಸಕಿ ಮಲ್ಲಕಾ ರಾವ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಅರವಿಂದ ಪ್ರಸಾದ್ ವಂದಿಸಿದರು.
0 Comments