ಪಡುಮಾರ್ನಾಡಿನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ, *ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು

ಜಾಹೀರಾತು/Advertisment
ಜಾಹೀರಾತು/Advertisment

 ಪಡುಮಾರ್ನಾಡಿನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ, 

*ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು


ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್,  ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಇವುಗಳ ವತಿಯಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ನಾಲ್ಕು ದಿನಗಳ ಕಾಲ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು.


 ಪಂಚಾಯತ್ ವತಿಯಿಂದ  ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಂಡಿದ್ದು  ಮುಂದುವರೆದ ಭಾಗವಾಗಿ ಈ ಶಿಬಿರವನ್ನು ಆಯೋಜಿಸಲಾಗಿದ್ದು ಗ್ರಂಥಾಲಯ ಮೇಲ್ವೀಚಾರಕಿ ವನಿತಾ ಅವರು ಮಕ್ಕಳಿಗೆ ಪೇಪರ್ ಬಳಸಿ ಹೂಗಳನ್ನು ರಚಿಸುವುದು, ಪೇಪರ್ ಲೋಟಗಳನ್ನು ಬಳಸಿ ಆಟದ ವಸ್ತುಗಳ ರಚನೆ, ಡ್ರಾಯಿಂಗ್, ತೆಂಗಿನ ಗರಿಗಳನ್ನು ಬಳಸಿ ಹೂವುಗಳ ರಚನೆ, ಪ್ರಬಂಧ ರಚನೆ ಹಾಗೂ ನೃತ್ಯ ಮುಂತಾದುವುಗಳ ಬಗ್ಗೆ ತರಬೇತಿಯನ್ನು ನೀಡಿದರು.        


ಉದ್ಘಾಟನೆ : ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ವೆಂಕಟಾಚಲಪತಿ ರಾಜು ಅವರು ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ್  ಚೌಟ ಹಾಗೂ ಗ್ರಂಥಾಲಯ ಮೇಲ್ವಿಚಾರಕಿ ವನಿತಾ ಈ ಸಂದರ್ಭದಲ್ಲಿದ್ದರು.

ಪಂಚಾಯತ್ ವ್ಯಾಪ್ತಿಯ ಸುಮಾರು 15 ಮಂದಿ ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು. 

  ಸಮಾರೋಪ ಸಮಾರಂಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭಾಗವಹಿಸಿ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪ್ರಮಾಣಪತ್ರವನ್ನು ವಿತರಿಸಿದರು.






Post a Comment

0 Comments