ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಪ್ರತಿಭೆ ಮೌಲ್ಯ ವೈ ಆರ್ ಜೈನ್ :

ಜಾಹೀರಾತು/Advertisment
ಜಾಹೀರಾತು/Advertisment

 ರಾಷ್ಟ್ರಮಟ್ಟದ ಪ್ರತಿಷ್ಠಿತ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಪ್ರತಿಭೆ ಮೌಲ್ಯ ವೈ ಆರ್ ಜೈನ್ : 


ಮಡುಬಿದಿರೆ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ‘ಇಸ್ರೋ’ ಅವರು ಶಾಲಾ ಮಕ್ಕಳಿಗಾಗಿ ಪ್ರತಿ ವರ್ಷವೂ ಆಯೋಜಿಸುವ ರಾಷ್ಟ್ರಮಟ್ಟದ ಯುವ ವಿಜ್ಞಾನಿ ಕಾರ್ಯಕ್ರಮ ‘ಯುವಿಕ’ಗೆ ಈ ಬಾರಿ ಮೂಡುಬಿದಿರೆಯ ಎಕ್ಸಲೆಂಟ್ ನ ಪ್ರತಿಭೆ ಮೌಲ್ಯ ವೈ .ಆರ್. ಜೈನ್ ಆಯ್ಕಗೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಯನ್ನು ಗೈದು ಗಮನ ಸೆಳೆದಿದ್ದಾರೆ.


 ಇಸ್ರೋ’ ನ ವಿವಿಧ ಕೇಂದ್ರಗಳಲ್ಲಿ ಎರಡು ವಾರಗಳ ಕಾಲ ಜರಗುವ ಯುವಿಕ-೨೦೨೪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ಬಾರಿ ದೇಶದ ಎಲ್ಲಾ ರಾಜ್ಯಗಳಿಂದ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ೮೫೦೦೦ಕ್ಕೂ ವಿದ್ಯಾರ್ಥಿಗಳು ಆಕಾಂಕ್ಷಿಗಳಾಗಿ ಅರ್ಜಿಯನ್ನು ಸಲ್ಲಿಸಿದ್ದರು. ವಿದ್ಯಾರ್ಥಿಗಳ ಮೂರು ವರುಷಗಳ ಶೈಕ್ಷಣಿಕ ಸಾಧನೆ, ರಾಜ್ಯ ರಾಷ್ಟ್ರಮಟ್ಟದ ವೈಜ್ಞಾನಿಕ, ಕ್ರೀಡಾ ಸಾಧನೆಗಳು, ಒಲಂಪಿಯಾಡ್ ತತ್ಸಮಾನ ಸ್ಪರ್ಧೆಗಳಲ್ಲಿ ಪಡೆದ ರ‍್ಯಾಂಕ್ ಜೊತೆಗೆ ಮುಖ್ಯವಾಗಿ ಇಸ್ರೋ ಆಯೋಜಿಸುವ ಆನ್‌ಲೈನ್ ರಸಪ್ರಸ್ನೆಯಲ್ಲಿ ವಿದ್ಯಾರ್ಥಿಯ ಫಲಿತಾಂಶ ಇವೆಲ್ಲವನ್ನು ಮಾನದಂಡವನ್ನಾಗಿರಿಸಿ ೨೫೦ ಮಂದಿ ವಿದ್ಯಾರ್ಥಿಗಳನ್ನು ಪ್ರಸಕ್ತ ಸಾಲಿನ ‘ಯುವಿಕ’ಕ್ಕೆ ಆಯ್ಕೆ ಮಾಡಲಾಗಿದ್ದು ಈ ಪಟ್ಟಿಯಲ್ಲಿ ೧೨ ಮಂದಿಯಲ್ಲಿ ರಾಜ್ಯ ಪಠ್ಯಕ್ರಮ ಭೋಧಿಸುವ ಶಿಕ್ಷಣ ಸಂಸ್ಥೆಯಿಂದ ಆಯ್ಕೆಯಾಗಿ ಭಾಗವಹಿಸಿದ ಕರ್ನಾಟಕದ ಏಕೈಕ ವಿದ್ಯಾರ್ಥಿನಿ ಮೂಡುಬಿದಿರೆಯ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೌಲ್ಯ ವೈ ಆರ್ ಜೈನ್ ಆಗಿರುವುದು ಶಿಕ್ಷಣ ಕಾಶಿ ಎನಿಸಿದ ಮೂಡುಬಿದಿರೆಗೆ ವಿಶೇಷ ಮೆರಗನ್ನು ತಂದಿದೆ.

ಈಗಾಗಲೇ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ ಕಾರ್ಯಕ್ರಮದಲ್ಲಿ ವಿಜ್ಞಾನ ಮಾದರಿ ತಯಾರಿ, ಜಿಲ್ಲಾ ರಾಜ್ಯ ಮಟ್ಟದ ಆನ್ ಲೈನ್  – ಆಫ್‌ಲೈನ್ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಜೊತೆಗೆ ರಾಷ್ಟ್ರ, ರಾಜ್ಯಮಟ್ಟದ ಅಟಲ್ ಮ್ಯಾರಥಾನ್, ಇನ್‌ಸ್ಪಾಯರ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿನೂತನವಾದ ಸಂಶೋಧನಾತ್ಮಕ ಮಾದರಿಗಳನ್ನು ಪ್ರಸ್ತುತ ಪಡಿಸುವ ಮೂಲಕ ಗಮನ ಸೆಳೆದಿರುವ ಈ ಪ್ರತಿಭೆ ಮೂಡುಬಿದಿರೆಯ ಪ್ರತಿಷ್ಠಿತ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್-ರಶ್ಮಿತಾ  ಅವರ ಸುಪುತ್ರಿ.

ವಿದ್ಯಾರ್ಥಿನಿಯ ಈ ವಿಶೇಷ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಆಭಿನಂದನೆಯನ್ನು ಸಲ್ಲಿಸಿದ್ದಾರೆ.

Post a Comment

0 Comments