ನೇಣು ಬಿಗಿದು ಯುವತಿ ಆತ್ಮಹತ್ಯೆ

ಜಾಹೀರಾತು/Advertisment
ಜಾಹೀರಾತು/Advertisment

 ನೇಣು ಬಿಗಿದು ಯುವತಿ ಆತ್ಮಹತ್ಯೆ

ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

  ಮೂಡುಬಿದಿರೆಯಲ್ಲಿ ಫಾಸ್ಟ್ ಫುಡ್ ಕ್ಯಾಂಟೀನ್ ನಡೆಸುತ್ತಿದ್ದ ಮಾರ್ಪಾಡಿ ಗ್ರಾಮದ ನಾಗರಕಟ್ಟೆ ಅಬ್ಬಕ್ಕ ನಗರದ ನಿವಾಸಿ ಹರೀಶ್ ಕೋಟ್ಯಾನ್ ಅವರ ಏಕೈಕ ಪುತ್ರಿ ಶರಣ್ಯ (19ವ) ಆತ್ಮಹತ್ಯೆ ಮಾಡಿಕೊಂಡ ಯುವತಿ. 

 ಶರಣ್ಯ ಮೂಲ್ಕಿಯಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಈ ಸಂದರ್ಭ  ಹುಡುಗನೋರ್ವನನ್ನು ಆಕೆ ಪ್ರೀತಿಸುತ್ತಿದ್ದಳು ಈ ವಿಷಯ ಹೆತ್ತವರಿಗೆ ಗೊತ್ತಾಗಿ ಆಕೆಯನ್ನು ನಾಲ್ಕು ತಿಂಗಳ ಹಿಂದೆ ಮೂಡುಬಿದಿರೆಗೆ ಕರೆದುಕೊಂಡು ಬಂದಿದ್ದು ನಂತರ ಕಾಲೇಜಿಗೆ ಹೋಗದೆ ಮನೆಯಲ್ಲಿಯೇ ಉಳಿದುಕೊಂಡು ಖಿನ್ನತೆಗೆ ಒಳಗಾಗಿದ್ದಳು.

ತಂದೆ ತಾಯಿ ಇಬ್ಬರೂ ಕ್ಯಾಂಟೀನ್ ಗೆ ಹೋದಾಗ ಮನೆಯಲ್ಲಿ ಒಬ್ಬಳೇ ಬಾಗಿಲು ಹಾಕಿ ಕುಳಿತುಕೊಳ್ಳುತ್ತಿದ್ದಳು. ಶುಕ್ರವಾರ ಸಂಜೆ ಹೆತ್ತವರು ಎಂದಿನಂತೆ ಮನೆಗೆ ಹೋದಾಗ ಆಕೆಯ ರೂಮ್ ಗೆ ಚಿಲಕ ಹಾಕಿತ್ತು. ಹಿಂದೆ ಕಿಟಕಿಯ ಮೂಲಕ ಇಣುಕಿ ನೋಡಿದಾಗ ಚೂಡಿದಾರದ ಶಾಲನ್ನು ಕಿಟಕಿಗೆ ಕಟ್ಟಿ ಅದನ್ನು ಕುತ್ತಿಗೆಗೆ ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

 ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Post a Comment

0 Comments