ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ


ಮೂಡುಬಿದಿರೆ : ಕಾಂಗ್ರೆಸ್ ಮುಖಂಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ರಾಜಕರಣಿಯಾಗಿ ಗುರುತಿಸಿಕೊಂಡು ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ  ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Post a Comment

0 Comments

Advertisement