ವಿಶ್ವಕರ್ಮ ಮಕ್ಕಳಿಗಾಗಿ ಬೇಸಿಗೆ ಶಿಬಿರ

ಜಾಹೀರಾತು/Advertisment
ಜಾಹೀರಾತು/Advertisment

 ವಿಶ್ವಕರ್ಮ ಮಕ್ಕಳಿಗಾಗಿ ಬೇಸಿಗೆ ಶಿಬಿರ


ಮೂಡುಬಿದಿರೆ : ಕಾಳಿಕಾಂಬಾ ಮಹಿಳಾ ಸಮಿತಿ ವತಿಯಿಂದ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಬೇಸಿಗೆ ಶಿಬಿರವು ಶನಿವಾರ ಉದ್ಘಾಟನೆಗೊಂಡಿತು. ಕ್ಷೇತ್ರದ ಆಡಳಿತ ಮೊಕ್ತೇಸರ ಜಯಕರ ಆಚಾರ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣದ ಕೊರತೆಯಿರುವುದರಿಂದ ಜನರು ಮೃಗೀಯ ಮನೋಭಾವನೆಯನ್ನು ಬೆಳೆಸಿಕೊಳ್ಳುತ್ತಿದ್ದಾರೆ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ನೈತಿಕ ಮೌಲ್ಯ, ಸಂಸ್ಕಾರಯುತ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು. ಹಿರಿಯರಾದ ಪ್ರೇಮಾ ಶ್ರೀಧರ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.  

ವೇದಿಕೆಯಲ್ಲಿ ಮೊಕ್ತೇಸರರಾದ ಬಾಲಕೃಷ್ಣ ಆಚಾರ್ಯ, ಶಿವರಾಮ ಆಚಾರ್ಯ, ಕಾಳಿಕಾಂಬಾ ಸೇವಾ ಸಮಿತಿಯ ಉಪಾಧ್ಯಕ್ಷ ಭಾಸ್ಕರ ಆಚಾರ್ಯ ಉಪಸ್ಥಿತರಿದ್ದರು. ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಶಾಂತಲಾ ಸೀತಾರಾಮ ಆಚಾರ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ವಿದ್ಯಾ ಸುರೇಶ್ ಆಚಾರ್ಯ ವಂದಿಸಿದರು. ಕಾರ್ಯದರ್ಶಿ ರಶ್ಮಿತಾ ಅರವಿಂದ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಯೋಗೀಶ್ ಆಚಾರ್ಯ, ರತ್ನಾವತಿ. ಎ. ಬೈಕಾಡಿ, ಅಕ್ಷತಾ ಬೈಕಾಡಿ, ಸಾಣೂರು ರಾಮಚಂದ್ರ ಆಚಾರ್ಯ, ನಾಗರಾಜ ಆಚಾರ್ಯ, ಗ್ರೀಷ್ಮ ಉಳಿಯ ಭಾಗವಹಿಸಿದರು.

Post a Comment

0 Comments