ದೆಹಲಿಯಿಂದ ಬಂದ ಕೂಡಲೇ ಫೀಲ್ಡಿಗಿಳಿದ ಕೋಟ:ರಾಷ್ಟ್ರೀಯ ಹೆದ್ದಾರಿ ಬಗ್ಗೆ ಸಭೆ

ಜಾಹೀರಾತು/Advertisment
ಜಾಹೀರಾತು/Advertisment

 ದೆಹಲಿಯಿಂದ ಬಂದ ಕೂಡಲೇ ಫೀಲ್ಡಿಗಿಳಿದ ಕೋಟ:ರಾಷ್ಟ್ರೀಯ ಹೆದ್ದಾರಿ ಬಗ್ಗೆ ಸಭೆ

ಮಳೆಗಾಲ ಆರಂಭವಾಗಿದೆ. ಅನೇಕ ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು ಪ್ರಯಾಣಿಕರಿಗೆ ಸಮಸ್ಯೆ ಆಗುವ ಸಂಭವವಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಬಂದಿಸಿದಂತೆ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಭೆ ನಡೆಸಿದರು. 

ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ವೇಗ ನೀಡುವುದು ಹಾಗೂ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಕಾಮಗಾರಿ ನಡೆಸುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ, ಶ್ರೀ ಗುರ್ಮೆ ಸುರೇಶ್ ಶೆಟ್ಟಿ,  ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕುಮಾರ್, ರಾಷ್ಟ್ರೀಯ ಹೆದ್ದಾರಿ ಸಂಭಂದಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0 Comments