ಕಾಂಗ್ರೆಸ್ ಸರ್ಕಾರ ಇದೆ ಎಂದು ಬಾಲ ಬಿಚ್ಚಿದರೆ ನಾವು ಸುಮ್ಮನಿರಲ್ಲ-ಹಲ್ಲೆಗೊಳಗಾದ ಕಾರ್ಯಕರ್ತರನ್ನು ಭೇಟಿಯಾದ ಕಟೀಲ್
ನರೇಂದ್ರ ಮೋದಿಯವರು ಸತತ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯೋತ್ಸವದಲ್ಲಿ ಭಾಗವಹಿಸಿದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಕಟೀಲ್ "ನಮ್ಮ ಪ್ರತಿ ದೇವದುರ್ಲಭ ಕಾರ್ಯಕರ್ತ ಬಂಧುವಿನೊಂದಿಗೆ ನಮ್ಮ ಪಕ್ಷ ನಿಂತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದೆ ಎಂದು ಮತೀಯವಾದಿಗಳು ಬಾಲ ಬಿಚ್ಚಿದರೆ ತಕ್ಕ ಪಾಠ ಕಲಿಸಲು ನಾವು ಸಿದ್ಧರಿದ್ದೇವೆ. ಆದರೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡು ಜಿಲ್ಲೆಯ ಶಾಂತಿ, ಸುವ್ಯವಸ್ಥೆಯನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಬೇಕು" ಎಂದು ಹೇಳಿದರು.
0 Comments