ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಮೂಡುಬಿದಿರೆ: ಲಯನ್ಸ್ ಕ್ಲಬ್ ಮೂಡುಬಿದಿರೆ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಯಲ್ಲಿ ಹಣ್ಣು ಹಂಪಲುಗಳ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ತದನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಸಂಗನ ಬಸಯ್ಯ ಹಿರೇಮಠ್ ರವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಲl ಜೋಸ್ಸಿ ಮೆನೇಜಸ್, ಸಂಪನ್ಮೂಲ ವ್ಯಕ್ತಿಗಳಾಗಿ
ಲl ಶಿವಪ್ರಸಾದ್ ಹೆಗ್ಡೆ ಕೆ. ಅತಿಥಿಗಳಾಗಿ ನಿಯೋಜಿತ ಅಧ್ಯಕ್ಷರಾದ
ಲl ಬೋನವೆಂಚರ್ ಮೆನೇಜಸ್, ನಿಯೋಜಿತ ಕೋಶಾಧಿಕಾರಿ
ಲl ಪ್ರಶಾಂತ್ ಶೆಟ್ಟಿ, ಸಂಸ್ಥೆಯ ಶಿಕ್ಷಕ ಸಿಬ್ಬಂದಿಗಳು ಹಾಗೂ ಪ್ರೌಢಶಾಲಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
0 Comments