ಮೂಡುಬಿದಿರೆಯಲ್ಲಿ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆಯಲ್ಲಿ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ


ಮೂಡುಬಿದಿರೆ: ಇಲ್ಲಿನ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್, ಪವರ್ ಫ್ರೆಂಡ್ಸ್ ಬೆದ್ರ, ಸಮಾಜ ಮಂದಿರ ಸಭಾ ಇವುಗಳ ಜಂಟಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನವು ಸಮಾಜ ಮಂದಿರದಲ್ಲಿ ಭಾನುವಾರ ನಡೆಯಿತು.


   ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ಸಮಾಜ ಸೇವೆ ನಮ್ಮ ಗುರಿ. ಅಸಹಾಯಕರಿಗೆ ನಮ್ಮ ಸೇವೆಗಳು ತಲುಪಬೇಕೆಂಬ  ನಿಟ್ಟಿನಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿಯಂತಹ ಕೆಲಸವನ್ನು ವಿವಿಧ ಸಂಸ್ಥೆಗಳು ಮಾಡುತ್ತಿದ್ದು ಇದಕ್ಕೆ ಪೂರಕವಾಗಿ ತಾವು ಸ್ಪಂದಿಸಬೇಕೆಂದು ಹೇಳಿದರು.

  ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೆ.ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.

 ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಕ್ಷತಾ ನಾಯಕ್  ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮೂಡುಬಿದಿರೆ ವ್ಯಾಪ್ತಿಯಲ್ಲಿ ಡೆಂಗ್ಯೂ, ಮಲೇರಿಯಾದಂತಹ ರೋಗಗಳು ಹೆಚ್ಚಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ತಾವೆಲ್ಲರೂ ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕೆಂದು ಹೇಳಿದರು.

ಖ್ಯಾತ ನ್ಯಾಯವಾದಿ ಶರತ್ ಡಿ. ಶೆಟ್ಟಿ, ಲಯನ್ಸ್ ಕ್ಲಬ್ ನ ಝೋನ್ ಚೇರ್ ಪರ್ಸನ್ ದಿನೇಶ್ ಎಂ.ಕೆ, ಪವರ್ ಫ್ರೆಂಡ್ಸ್ ಬೆದ್ರ ಇದರ ಅಧ್ಯಕ್ಷ ವಿನಯ ಕುಮಾರ್, ಲಿಯೋ ಕ್ಲಬ್ ನ ಅಧ್ಯಕ್ಷ ಸ್ವಯಂ ಪೂಜಾರಿ ಅತಿಥಿಗಳಾಗಿ ಭಾಗವಹಿಸಿದ್ದರು.

 ಮೂಡುಬಿದಿರೆ ಲಯನ್ಸ್ ಕ್ಲಬ್ ನ ಅಧ್ಯಕ್ಷ ಜೊಸ್ಸಿ ಮಿನೇಜಸ್‌ ಸ್ವಾಗತಿಸಿದರು. ಅಂಚೆ ಇಲಾಖೆಯ ಪುತ್ತೂರು ವಿಭಾಗದ ಮಾರ್ಕೆಟಿಂಗ್‌ ಮೆನೇಜರ್ ಗುರುಪ್ರಸಾದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೇಸಿ ಯ ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Post a Comment

0 Comments