ಯುವತಿ ಮೇಲೆ ಮೂವರಿಂದ ಅತ್ಯಾಚಾರ: ಮೂಡುಬಿದಿರೆ ಯುವಕರ ಬಂಧನ
ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಮೂವರು ಅತ್ಯಾಚಾರ ಎಸಗಿದ ಪರಿಣಾಮ ಆಕೆ ಗರ್ಭೀಣಿಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಸಂಬಂಧಿಸಿ ಅಪ್ರಾಪ್ತ ವಯಸ್ಸಿನ ಯುವಕನ ಸಹಿತ ಮೂಡುಬಿದಿರೆಯ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೇರೆ ಬೇರೆ ಸಮಯದಲ್ಲಿ ಈ ಮೂವರು ಯುವಕರು ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭಿಣಿಯಾಗಲು ಕಾರಣರಾಗಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್‌ರೇಪ್ ಹಾಗೂ ಪೋಕ್ಸ್ ಅಡಿಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
ಮೂಡುಬಿದಿರೆ ನಿವಾಸಿಗಳಾದ ಮಹಮ್ಮದ್ ಇಕ್ವಾಲ್(26), ಫಾರೂಕ್(19) ಹಾಗೂ 18 ವರ್ಷದ ಯುವಕನನ್ನು ಬಂಧಿಸಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18.5 ವಯಸ್ಸಿನ ಯುವತಿ ಮೇಲೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಅತ್ಯಾಚಾರ ಎಸಗಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿ ಮೇ 3 ರಂದು ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಭಾನುವಾರ ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರು
0 Comments