ಎಸ್ ಎನ್ ಎಂ ಪಾಲಿಟೆಕ್ನಿಕ್ ಮೂಡುಬಿದಿರೆ - ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ವಿವಿಧ ಸರಕಾರಿ ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ
ಮೂಡುಬಿದಿರೆ: ಎಸ್.ಎನ್.ಮೂಡುಬಿದಿರೆ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಸುಮಾರು 6 ತಂಡಗಳ ಮೂಲಕ ವಲಯ ಅರಣ್ಯ ಇಲಾಖೆ ಮೂಡುಬಿದಿರೆ ಇದರ ಸಹಕಾರದೊಂದಿಗೆ, ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ 8 ವಿವಿಧ ಸರಕಾರಿ ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ವನ್ನು ಹಮ್ಮಿಕೊಂಡಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಬೋಡಿ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಒಂಟಿಕಟ್ಟೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಡಂದಡ್ಕ,
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಶಿಪಟ್ನ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಚ್ಚರಕಟ್ಟೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಂಗಡಿ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ಇಲ್ಲಿ ಗಿಡಗಳನ್ನು ನೆಡಲಾಯಿತು.
ಪಾಲಿಟೆಕ್ನಿಕ್ ನ ಸುಮಾರು 40 ಎನ್‌ಎಸ್ ಎಸ್ ವಿದ್ಯಾರ್ಥಿಗಳ ಜೊತೆಗೆ ಸಾಮಾಜಿಕ ಅರಣ್ಯ ವಲಯ ಮಂಗಳೂರು ಇದರ ವಲಯ ಅರಣ್ಯ ಅಧಿಕಾರಿ ಕಿರಣ್ ಕುಮಾರ್ ಜಿ. ಉಪ ವಲಯ ಅರಣ್ಯ ಅಧಿಕಾರಿ ಆನಂದ ಅವರು ಭಾಗವಹಿಸಿದ್ದರು.
ಆಯಾ ಶಾಲೆಯ ಮುಖ್ಯ ಶಿಕ್ಷಕರು, ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು , ಪಂಚಾಯತ್ ಸದಸ್ಯರು,
ಅಧ್ಯಾಪಕ ವೃಂದ ಹಾಗು ಶಾಲಾ ಮಕ್ಕಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು.
ಪಾಲಿಟೆಕ್ನಿಕ್ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ರಾಮ್ ಪ್ರಸಾದ್ ಹಾಗೂ ಗೋಪಾಲಕೃಷ್ಣ ಇವರು ಉಪಸ್ಥಿತರಿದ್ದರು .
0 Comments