ಆಳ್ವಾಸ್ ಹಲಸುಮೇಳಕ್ಕೆ ಸಿದ್ಧತೆ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ ಅಳ್ವಾಸ್ ಆಹಾರೋತ್ಸವ ಮಹಾಮೇಳ ಸಮಿತಿ, ಮೂಡುಬಿದಿರೆ ಕೃಷಿ ಇಂಜಿನಿಯರಿಂಗ್ ವಿಭಾಗ ಮತ್ತು ಆಳ್ವಾಸ್ ತಾಂತ್ರಿಕ ಕಾಲೇಜು ಮಿಜಾರು ಇವುಗಳ
ಸಂಯುಕ್ತ ಆಶ್ರಯದಲ್ಲಿ
ಕೃಷಿ ಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ
ಎರಡನೇ ವರ್ಷದ ಹಲಸು-ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ "ಸಮೃದ್ಧಿ" ಯು ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿದ್ದು ಅದಕ್ಕಾಗಿ ಭರದ ಸಿದ್ಧತೆ ನಡೆದಿದೆ.
ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಬೆಳಿಗ್ಗೆ 10ರಿಂದ ಕಾರ್ಯಕ್ರಮವು ನಡೆಯಲಿದ್ದು ಅದಕ್ಕಾಗಿ ಮುಂಭಾಗದಲ್ಲಿ ಹಲಸುಗಳಿಂದಲೇ ಸಿಂಗರಿಸಿದ ಸ್ವಾಗತ ದ್ವಾರವು ಎಲ್ಲರನ್ನು ಆಕರ್ಷಿಸುತ್ತಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಹಲಸು ಮೇಳವನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಕಿ
0 Comments