ಕಳ್ಳಬಟ್ಟಿ ದಂಧೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತನ ಬಂಧನ
ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ದಂಧೆಯನ್ನು ನಡೆಸುತ್ತಿದ್ದ ಆರೋಪಿಗಳನ್ನು ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿ ಕಲ್ಲಬೊಟ್ಟು ನಿವಾಸಿ ಗೋಪಾಲ್ ಶೇರಿಗಾರ್ ಹಾಗೂ ಇತರರು ಅಕ್ರಮವಾಗಿ ತಮ್ಮ ಮನೆಯ ಬಳಿ ಕಳ್ಳಬಟ್ಟಿ ದಂಧೆಯನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಉಪಯೋಗಿಸುತ್ತಿದ್ದ ಉಪಕರಣಗಳು ಹಾಗೂ ಮಧ್ಯದ ವಸ್ತುಗಳು ದೊರೆತಿದೆ ಎನ್ನಲಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಆರೋಪಿ ಗೋಪಾಲ್ ಶೇರಿಗಾರ್ ಮರೋಡಿ ಗ್ರಾಮದ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷನಾಗಿದ್ದು ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಆಪ್ತನಾಗಿದ್ದಾನೆ.
0 Comments