ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ: ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆ ಎನ್ ಸಿಸಿ ಘಟಕದಿಂದ ಜಾಗೃತಿ ಜಾಥಾ

ಜಾಹೀರಾತು/Advertisment
ಜಾಹೀರಾತು/Advertisment

 ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ: ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆ ಎನ್ ಸಿಸಿ ಘಟಕದಿಂದ ಜಾಗೃತಿ  ಜಾಥಾ

ಮೂಡುಬಿದಿರೆ: ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ  ಮೂಡುಬಿದಿರೆಯ  ಶ್ರೀ ಮಹಾವೀರ ಕಾಲೇಜಿನ ಎನ್ ಸಿಸಿ ಘಟಕವು ಮಾನವೀಯತೆಗೆ ಪೂರಕವಾದ ಜಾಥಾವನ್ನು ಹಮ್ಮಿಕೊಂಡಿತ್ತು. 


ಜಾಥಾಕ್ಕೆ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ ಚಾಲನೆ ನೀಡಿ ಮಾತನಾಡಿ  ಸ್ವಸ್ಥ ಸಮಾಜವನ್ನು ನಿರ್ಮಿಸುವಲ್ಲಿ ಎನ್ ಸಿಸಿ ಕೆಡೆಟ್‌ಗಳ ಪಾತ್ರ ಮಹತ್ವದ್ದಾಗಿದ್ದು, ದೇಶವನ್ನು ಕಾಯುವ ಕರ್ತವ್ಯವನ್ನು ನಿಭಾಯಿಸುವಂತಾಗಬೇಕು ಮತ್ತು ಮಾದಕ ವಸ್ತುಗಳ ಸೇವನೆಯ ಪರಿಣಾಮವನ್ನು ಸಮಾಜಕ್ಕೆ ತಿಳಿಸುವ ಜವಾಬ್ದಾರಿಯು ನಮ್ಮದಾಗಿದೆ ಎಂದು ಹೇಳಿದರು. 

 ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಉಪಸ್ಥಿತರಿದ್ದರು. 


ಈ ಜಾತಾದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು, ಮತ್ತು ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿದರು.

"ವ್ಯಸನ ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ನಾವು ಸಕ್ರೀಯ ಪಾತ್ರ ವಹಿಸಬೇಕು" ಎಂಬ ಸಂದೇಶವನ್ನು ಹರಡಿದರು. 


ಈ ಅಭಿಯಾನವು, ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾದಕ ವಸ್ತುಗಳ ಅಪಾಯದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಆಗಿದೆ.

Post a Comment

0 Comments