ಬಂಟ್ವಾಳ ಬಿಜೆಪಿ ವಿಜಯೋತ್ಸವದ ವೇಳೆ ಹಲ್ಲೆ:ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಏನು ಮಾಡಬೇಕೆಂದು ಗೊತ್ತಿದೆ-ನಳಿನ್

ಜಾಹೀರಾತು/Advertisment
ಜಾಹೀರಾತು/Advertisment

 ಬಂಟ್ವಾಳ ಬಿಜೆಪಿ ವಿಜಯೋತ್ಸವದ ವೇಳೆ ಹಲ್ಲೆ:ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಏನು ಮಾಡಬೇಕೆಂದು ಗೊತ್ತಿದೆ-ನಳಿನ್

ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ವಿಜಯೋತ್ಸವದ ಕಾರ್ಯಕ್ರಮದ ಸಂದರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರಾದ ಹರೀಶ್ ಹಾಗೂ ವಿನೋದ್ ಅವರ ಮೇಲೆ ಕಾಂಗ್ರೆಸ್ ಪಕ್ಷದವರು ಎನ್ನಲಾದ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದು, ಈಗ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಪ್ರಕರಣ ಸಂಬಂಧ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದ್ದು ಆರೋಪಿಗಳನ್ನು ಬಂಧಿಸದಿದ್ದರೆ ಏನು ಮಾಡಬೇಕೆಂದು ಗೊತ್ತಿದೆ ಎಂದು ಹೇಳಿದ್ದಾರೆ.


 "ಇದು ನಮ್ಮ ರಾಜ್ಯ ಸರ್ಕಾರದ ಕಣ್ಣಿಗೆ ಬೀಳಲ್ಲ ! ಬಿದ್ದರೂ ಈ ಬಗ್ಗೆ ತನಿಖೆ ನಡೆಸಲ್ಲ. ಈ ಬಗ್ಗೆ ತಕ್ಷಣವೇ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ, ಇಲ್ಲವಾದರೆ ಹೋರಾಟ ಹೇಗೆ ಮಾಡಬೇಕೆಂದು ನಮಗೆ ತಿಳಿದಿದೆ" ಎಂದು ನಳಿನ್ ಕುಮಾರ್ ಕಟೀಲು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದ್ದಾರೆ.

Post a Comment

0 Comments