ಬೆಳ್ತಂಗಡಿ ಬಿಜೆಪಿ ನಾಯಕ ಕೊಲೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ ಅರೆಸ್ಟ್:ಬಿಜೆಪಿಯಿಂದ ಮತ್ತಷ್ಟು ತನಿಖೆಗೆ ಆಗ್ರಹ
ಬಿಜೆಪಿ ಮುಖಂಡ ಎಸ್ಟಿ ಮೋರ್ಚಾದ ಅಧ್ಯಕ್ಷರ ಕೊಲೆ ಯತ್ನ ಪ್ರಕರಣ ಆರೋಪಿ ಕಾಂಗ್ರೆಸ್ ಮುಖಂಡ ಕುಶಾಲಪ್ಪ ಗೌಡ ಬಂಧನ
ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಂ.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ರಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ(48) ಎಂಬಾತನು ರಾಜೇಶ್ ಎಂ.ಕೆ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ ಕುಶಾಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಜೇಶ್.ಎಂ.ಕೆ ನೀಡಿದ ದೂರಿನ ಮೇರೆಗೆ ಅಟ್ರಾಸಿಟಿ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
0 Comments