ಫೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಅರಿವು

ಜಾಹೀರಾತು/Advertisment
ಜಾಹೀರಾತು/Advertisment

 ಫೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಅರಿವು 

ಮೂಡುಬಿದಿರೆ: ಇಲ್ಲಿನ ರೋಟರಿ ಪದವಿಪೂರ್ವ ಕಾಲೇಜಿನಲ್ಲಿ ಪೋಕೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಸೋಮವಾರ ಹಮ್ಮಿಕೊಳ್ಳಲಾಯಿತು.  ನ್ಯಾಯವಾದಿ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ ಬಾಹುಬಲಿ ಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ  ವಿದ್ಯಾರ್ಥಿ ಜೀವನದಲ್ಲಿ ಕಾನೂನಿನ ಅವಶ್ಯಕತೆಯ ಬಗ್ಗೆ ತಿಳಿಸಿದರು. 

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನ್ಯಾಯವಾದಿ  ಮೇಘರಾಣಿ ಅವರು ಫೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಯ ಕುರಿತು ವಿದ್ಯಾರ್ಥಿಗಳಿಗೆ ಸವಿವರವಾದ ಮಾಹಿತಿಯನ್ನು ನೀಡಿದರು. 


 ಕಾಲೇಜಿನ ಸಂಚಾಲಕ ರೋ. ಜೆ. ಡಬ್ಲ್ಯೂ ಪಿಂಟೊ  ಅಧ್ಯಕ್ಷತೆಯನ್ನು ವಹಿಸಿದ್ದರು. 


ಆಡಳಿತ ಮಂಡಳಿಯ ಸದಸ್ಯರಾದ ರೋ. ಎಚ್ ಮೋಹನ್ ಭಟ್ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ರೋಟರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ  ರವಿ ಕುಮಾರ್‌ ಸ್ವಾಗತಿಸಿದರು.  ಉಪನ್ಯಾಸಕಿ  ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.  ಮಾಲತಿ ಧನ್ಯವಾದಗೈದರು.u

Post a Comment

0 Comments