ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮನೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ

ಜಾಹೀರಾತು/Advertisment
ಜಾಹೀರಾತು/Advertisment

 ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮನೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ


ಕೇಂದ್ರದ ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರು ಪ್ರವಾಸ ಕೈಗೊಂಡ ಕೇಂದ್ರ ಸಚಿವ ವಿ ಸೋಮಣ್ಣ ಇಂದು ಬೆಳಿಗ್ಗೆ ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಮತ್ತು ಮಂಗಳೂರಿನ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲು ಇವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.  


ಕಟೀಲುರವರ ಮನೆಯಲ್ಲಿ ಬೆಳಗ್ಗಿನ ಉಪಹಾರದ ಆಯೋಜನೆ ಮಾಡಲಾಗಿದ್ದು ಉಪಾಹಾರ ಸೇವಿಸಿ ಮುಂದಿನ ದಿನಗಳಲ್ಲಿ ರೈಲ್ವೆ ಯೋಜನೆಗಳ ಅಭಿವೃದ್ಧಿ ಕುರಿತಂತೆ ಚರ್ಚಿಸಿದರು. ಈ ಹಿಂದೆ ಸಂಸದರಾಗಿ ಕಟೀಲು ಮಾಡಿದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಹಿತಿ ಕೇಳಿದ್ದು ಮುಂದಿನ ಅಭಿವೃದ್ಧಿ ಯೋಜನೆಗಳಿಗೆ ಸಹಕಾರವನ್ನು ಕೋರಿದರು. ಸಕಾರಾತ್ಮಕವಾಗಿ ಸ್ಪಂದಿಸಿದ ಕಟೀಲ್ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ತನ್ನ ಮುಕ್ತ ಸಹಕಾರವಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಟ್ಯಾಡಿ, ಮಂಗಳೂರಿನ ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ಇತರರು ಉಪಸ್ಥಿತರಿದ್ದರು.

Post a Comment

0 Comments