ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದ ಮನೆಗಳಿಗೆ ಹಾನಿ
ಮೂಡುಬಿದಿರೆ: ಸೋಮವಾರದಂದು ಬೀಸಿದ ಗಾಳಿ ಮಳೆಗೆ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ.
ಮೂಡುಕೊಣಾಜೆಯ ಮಾಲತಿ ಪೂಜಾರ್ತಿ ಮತ್ತು ದಿವ್ಯ ದಿನೇಶ್ ರವರ ಮನೆಗೆ ಮರ ಬಿದ್ದು ಹಾನಿಯಾಗಿರುವುದಲ್ಲದೆ ಗಣೇಶ್ ಪೂಜಾರಿ ಯವರ ಅಟೋದ ಮೇಲೆ ಮರ ಬಿದ್ದು ಪೂರ್ತಿ ಹಾನಿ ಯಾಗಿದೆ.
ಗ್ರಾಮ ಪಂಚಾಯತ್ ಸದಸ್ಯರಾ ದ ಸಂತೋಷ ಶೆಟ್ಟಿ ಮತ್ತು ದಿನೇಶ್ ಶೆಟ್ಟಿ ತಿಮರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹನುಮ ಗುಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮನೆಗಳ ಮೇಲೆ ಬಿದ್ದಿರುವ ಮರಗಳನ್ನು ತಕ್ಷಣ ತೆರವುಗೊಳಿಸಲು ಸೂಚಿಸಿದ್ದರು.
0 Comments