ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಜಾಹೀರಾತು/Advertisment
ಜಾಹೀರಾತು/Advertisment

 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮೂಡುಬಿದಿರೆ: ದಿಗಂಬರ ಜೈನ ಶಾಲೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

 ಜನ ಜಾಗೃತಿ ತಾಲೂಕು ಉಪಾಧ್ಯಕ್ಷ  ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಸಂಪನ್ಮೂಲ ವ್ಯಕ್ತಿಯಾಗಿ ಡಾಕ್ಟರ್ ಪ್ರಭಾಕರ್, ಮುಖ್ಯ ಅತಿಥಿಗಳಾಗಿ ತಾಲೂಕು ಯೋಜನಾಧಿಕಾರಿ  ಸುನೀತ ನಾಯಕ್ ಮತ್ತು ಶಾಲಾ ಮುಖ್ಯೋಪಾಧ್ಯಾಯನಿ ವೀಣಾ ಭಾಗವಹಿಸಿದ್ದರು.

  ಮೂಡುಬಿದಿರೆ ವಲಯದ ಅಧ್ಯಕ್ಷರಾದ ನಾರಾಯಣ ಪೂಜಾರಿ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸ್ಮಿತಾ ಹಾಗೂ ಮಾರ್ಪಾಡಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸ್ಮಿತಾ ಉಪಸ್ಥಿತರಿದ್ದರು.  ಜ್ಯೋತಿ ನಗರ ಸೇವಾ ಪ್ರತಿನಿಧಿ ಅನಿತಾ ಪಿ ಬಲ್ಲಾಳ್ ಸ್ವಾಗತಿಸಿದರು. ಮೂಡುಬಿದಿರೆ ವಲಯದ ಮೇಲ್ವಿಚಾರಕಿ  ಮಮತಾ ಕಾರ್ಯಕ್ರಮವನ್ನು ನಿರೂಪಿಸಿದರು. ಶೋಭಾ ವಂದಿಸಿದರು.

Post a Comment

0 Comments