ಮೂಡುಬಿದಿರೆ ಹಲವೆಡೆ ಜಲಾವೃತ
ಮೂಡುಬಿದಿರೆ: ಬೆಳಿಗ್ಗೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮೂಡುಬಿದಿರೆ ತಾಲೂಕಿನ ಕೆಲವು ಪ್ರದೇಶಗಳು ಜಲಾವೃತಗೊಂಡಿವೆ.
ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ನೀರು ರಸ್ತೆಗಳಲ್ಲಿ ತುಂಬಿಕೊಂಡಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಕೋಟೆಬಾಗಿಲು ಮಾರಿಗುಡಿಯ ದ್ವಾರದ ಬಳಿ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದಿರುವುದರಿಂದ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.
0 Comments