ಮೂಡುಬಿದಿರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್, ಇನ್ನರ್ ವ್ಹೀಲ್ ಕ್ಲಬ್ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ ಇವುಗಳ ವತಿಯಿಂದ ಶನಿವಾರ ಸಮಾಜಮಂದಿರದಲ್ಲಿ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಯಿತು.

 ಇನ್ನರ್ ವ್ಹೀಲ್ ಕ್ಲಬ್ ನ ಅಧ್ಯಕ್ಷೆ ಬಿಂದಿಯಾ ಶರತ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಕುಟುಂಬ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.


ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ನ ನೂತನ ಅಧ್ಯಕ್ಷ ಪೂರ್ಣಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಹರೀಶ್ ಎಂ.ಕೆ, ಪದಾಧಿಕಾರಿ ಶಂಕರ್ ಎ.ಕೋಟ್ಯಾನ್, ಇನ್ನರ್ ವ್ಹೀಲ್ ಕ್ಲಬ್ ನ ನಿಯೋಜಿತ ಕಾರ್ಯದರ್ಶಿ ಡಾ.ಸೀಮಾ ಸುದೀಪ್, ಮಂಗಳೂರು ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಜಯಂತಿ, ಬೆಳುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಭರತ್, ಡಾ.ಕಿರಣ್ ಉಪಸ್ಥಿತರಿದ್ದರು.

  ಕಲ್ಲಮುಂಡ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಖಾದರ್ ನದಾಫ್ ಸ್ವಾಗತಿಸಿದರು. ವಿಶ್ವ ಜನಸಂಖ್ಯಾ ದಿನದ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಕ್ಷತಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶರತ್ ಕುಮಾರ್ ವಂದಿಸಿದರು.

Post a Comment

0 Comments