ಆ.11: ಮೂಡುಬಿದಿರೆಯಲ್ಲಿ ಪಂಜಿನ ಮೆರವಣಿಗೆ
ಮೂಡುಬಿದಿರೆ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಆ.11ರಂದು ಮೂಡುಬಿದಿರೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ.
ಸಂಜೆ 6.30ರಿಂದ ಸಾವಿರ ಕಂಬದ ಬಸದಿಯಿಂದ ಸಮಾಜ ಮಂದಿರದವರೆಗೆ ಪಂಜಿನ ಮೆರವಣಿಗೆ ನಡೆಯಲಿದ್ದು ನ್ಯಾಯವಾದಿ ಶರತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
0 Comments