*ಅಗಸ್ಟ್3:ಮೂಡುಬಿದಿರೆ ಹೋಬಳಿ ಕ.ಸಾ.ಪ. ಪದಾಧಿಕಾರಿಗಳ ಪದಗ್ರಹಣ*

ಜಾಹೀರಾತು/Advertisment
ಜಾಹೀರಾತು/Advertisment

 *ಅಗಸ್ಟ್3:ಮೂಡುಬಿದಿರೆ ಹೋಬಳಿ ಕ.ಸಾ.ಪ. ಪದಾಧಿಕಾರಿಗಳ ಪದಗ್ರಹಣ*

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಆಶ್ರಯದಲ್ಲಿ ಮೂಡುಬಿದಿರೆ ಹೋಬಳಿ ಕ. ಸಾ. ಪ. ಘಟಕದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅಗಸ್ಟ್ 3 ರಂದು ಅಪರಾಹ್ನ 2.30 ಕ್ಕೆ ನಡೆಯಲಿದೆ ಎಂದು ಮೂಡುಬಿದಿರೆ ಹೋಬಳಿ ಘಟಕದ ಅಧ್ಯಕ್ಷರಾದ ಡಾ.ರಾಮಕೃಷ್ಣ ಶಿರೂರು ಪತ್ರಿಕೆಗೆ ತಿಳಿಸಿರುತ್ತಾರೆ.


ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಾ. ಶ್ರೀನಾಥ್ ಎಂ. ಪಿ. ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಶೆಟ್ಟಿ ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ತಾಲೂಕು ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾಗಿರುವ ಶ್ರೀಮತಿ ಸೌಮ್ಯ ಮತ್ತು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ನಾಗೇಶ್ ಎಸ್. ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.


 ಮೂಡುಬಿದಿರೆ ಹೋಬಳಿ ಘಟಕದ ಗೌರವ ಕಾರ್ಯದರ್ಶಿಗಳಾಗಿ 

ಡಾ. ದೊರೆಸ್ವಾಮಿ ಕೆ. ಎನ್., ಗೌರವ ಕೋಶಾಧಿಕಾರಿಯಾಗಿ ಶ್ರೀ ಶಿವಾನಂದ ಕಾಯ್ಕಿಣಿ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀ ದಿನಕರ ಕುಂಭಾಶಿ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿರುತ್ತಾರೆ.

Post a Comment

0 Comments