*ರಾ.ಶಿರೂರು ಅವರಿಗೆ ಅ.4ರಂದು ಸುವರ್ಣ ಕರ್ನಾಟಕ ಕಣ್ಮಣಿ ಪ್ರಶಸ್ತಿ ಪ್ರದಾನ: ಗಣೇಶ್ ಶೆಣೈ*

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 *ರಾ.ಶಿರೂರು ಅವರಿಗೆ ಅ.4ರಂದು ಸುವರ್ಣ ಕರ್ನಾಟಕ ಕಣ್ಮಣಿ ಪ್ರಶಸ್ತಿ ಪ್ರದಾನ: ಗಣೇಶ್ ಶೆಣೈ*


ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು  ಇವರಿಗೆ  ಸುವರ್ಣ ಕರ್ನಾಟಕ ಕಣ್ಮಣಿ- 2024 ರಾಜ್ಯ ಪ್ರಶಸ್ತಿಯನ್ನು ಅಗಸ್ಟ್ 4 ರಂದು ದಾವಣಗೆರೆಯಲ್ಲಿ ನಡೆಯುವ ಸಮಾರಂಭದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ದಾವಣಗೆರೆಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ  ಶ್ರೀ ಸಾಲಿಗ್ರಾಮ ಗಣೇಶ್ ಶಣೈ ಅವರು ತಿಳಿಸಿರುತ್ತಾರೆ.


ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. 

1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,

 19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.


ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ 

ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ದಾವಣಗೆರೆಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ.ಹೆಚ್.ಮಂಜುನಾಥ್

  ಅವರು ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Post a Comment

0 Comments

Advertisement