ಆಗಸ್ಟ್ 6 ರಂದು ಆಳ್ವಾಸ್ ನಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನೆನಪು
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಸಣ ಪ್ರತಿಷ್ಠಾನ (ರಿ ), ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಿ ), ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ( ರಿ ) ಪ್ರೆಸ್ ಕ್ಲಬ್ , ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನೆನಪು ಕಾರ್ಯಕ್ರಮ ಆಗಸ್ಟ್ 6 ರಂದು ಮಂಗಳವಾರ ಅಪರಾಹ್ನ 3 ಗಂಟೆಗೆ ಮೂಡುಬಿದಿರೆ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಅವರಣದಲ್ಲಿರುವ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ಪಿ ಬಿ ಹರೀಶ್ ರೈ ಮನೋಹರ ಪ್ರಸಾದ್ ಸ್ಮರಣೆ ಮಾಡಲಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕದ ಅಧ್ಯಕ್ಷ ಪ್ರೊ. ವೇಣುಗೋಪಾಲ ಶೆಟ್ಟಿ. ಕೆ, ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ, ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ, ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ಗೌರವ ಉಪಸ್ಥಿತಿ ಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
0 Comments