ನೇತಾಜಿ ಬ್ರಿಗೇಡ್ ನಿಂದ 85 ಮಂದಿಗೆ ಉಚಿತ ಕನ್ನಡಕ ವಿತರಣೆ
ಮೂಡುಬಿದಿರೆ: ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ
5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಒಟ್ಟು 110 ಅಭ್ಯರ್ಥಿಗಳಲ್ಲಿ ಅವಶ್ಯಕತೆಯಿದ್ದ 85 ಮಂದಿ ಫಲಾನುಭವಿಗಳಿಗೆ ಕನ್ನಡಕವನ್ನು ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ , ಸರ್ವೋದಯ ಫ್ರೆಂಡ್ಸ್ ಬೆದ್ರನ ಅಧ್ಯಕ್ಷ ಗುರುಪ್ರಸಾದ್ ಭಾಗವಹಿಸಿದರು.
ನೂತನ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ ಮತ್ತು ಉಪಾಧ್ಯಕ್ಷ ನಾಗರಾಜ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ನೇತಾಜಿ ಬ್ರಿಗೇಡ್ ಸ್ಥಾಪಕರಾದ ರಾಹುಲ್ ಕುಲಾಲ್, ಅಧ್ಯಕ್ಷ ದಿನೇಶ್ ಶೆಟ್ಟಿ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.
0 Comments