ಬೆಳೆವಿಮೆ ಯೋಜನೆ ಅರ್ಜಿ ಅವಧಿ ಮುಂದುವರಿಸಿ-ಕೇಂದ್ರ ಸಚಿವರಿಗೆ ಸಂಸದ ಕೋಟ ಮನವಿ

ಜಾಹೀರಾತು/Advertisment
ಜಾಹೀರಾತು/Advertisment

 ಬೆಳೆವಿಮೆ ಯೋಜನೆ ಅರ್ಜಿ ಅವಧಿ ಮುಂದುವರಿಸಿ-ಕೇಂದ್ರ ಸಚಿವರಿಗೆ ಸಂಸದ ಕೋಟ ಮನವಿ

ರೈತರಿಗೆ ವರದಾನವಾಗಿರುವ ಕೇಂದ್ರ ಸರ್ಕಾರದ ಬೆಳೆವಿಮೆ ಯೋಜನೆಗೆ ಅರ್ಜಿ ಹಾಕುವ ಅವಧಿಯನ್ನು ಮುಂದುವರಿಸುವಂತೆ ಕೋರಿ ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮನವಿ ಸಲ್ಲಿಸಿದರು.


ಉಡುಪಿ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ರೈತಾಪಿ ವರ್ಗ ಕೇಂದ್ರ ಸರ್ಕಾರದ ಹವಾಮಾನ ಆಧಾರಿತ ಬೆಳೆ ವಿಮೆಯ ಸದುಪಯೋಗ ಪಡೆಯುತ್ತಿದ್ದು ಪ್ರಸ್ತುತ ಆನ್ಲೈನ್ ಅರ್ಜಿ ಪ್ರಾರಂಭವಾದ ಹಿನ್ನೆಲೆಯಲ್ಲಿ ಹಲವಾರು ತೊಡಕುಗಳಿಂದ ರೈತರಿಗೆ ದಾಖಲಾತಿಗಳೊಂದಿಗೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ. ಆದ್ದರಿಂದ ಜುಲೈ ತಿಂಗಳ ಅಂತ್ಯದಲ್ಲಿ ಮುಗಿಯುವ ಬೆಳೆ ವಿಮೆ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಿ ರೈತಾಪಿ ವರ್ಗಕ್ಕೆ ಸಹಾಯ ಮಾಡಬೇಕೆಂದು ಗೌರವಾನ್ವಿತ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌವ್ಹಾನ್ ಅವರಲ್ಲಿ ಸಂಸತ್ತಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.


ಸಂಸದರ ಮನವಿಗೆ ಸ್ಪಂದಿಸಿದ ಸಚಿವರು ಈ ಬಗ್ಗೆ ಕೂಡಲೇ ಆದೇಶ ನೀಡುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟ ಮಾಹಿತಿ ನೀಡಿದರು.

Post a Comment

0 Comments