ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ
ಮೂಡುಬಿದಿರೆ: ದ.ಕ.ಜಿಲ್ಲಾ.ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಹಾಗೂ ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇವುಗಳ ಸಹಯೋಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2024-25ನೇ ಸಾಲಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಶುಕ್ರವಾರ ಕಲ್ಲಬೆಟ್ಟು ಅಕ್ಷಯಧಾಮ ಸಭಾಭವನದಲ್ಲಿ ನಡೆಯಿತು.
ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಯ್ಯ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ ದೇಹ ಮತ್ತು ಮನಸ್ಸು ಸದೃಢವಾಗಲು ಯೋಗ ಸಹಕಾರಿ. ವಿದ್ಯಾರ್ಥಿಗಳ ಸರ್ವಾಂಗಿಣ ಬೆಳವಣಿಗೆಗೆ ಕೇವಲ ಓದುವ, ಬರೆಯುವ ಶಿಕ್ಷಣ ಸಾಲದು ಬದಲಾಗಿ ದೈಹಿಕ ಶ್ರಮತೆಯ ಶಿಕ್ಷಣವೂ ಅಗತ್ಯ ಎಂದು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅದ್ಯಕ್ಷ ಸುಂದರ ಅವರು ಅಧ್ಯಕ್ಷತೆ ವಹಿಸಿದ್ದರು.
ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್, ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸುರೇಶ್ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಸಾಲ್ಯಾನ್, ರಾಜ್ಯ ಸರಕಾರಿ ನೌಕರರ ಸಂಘದ ಮೂಡುಬಿದಿರೆ ವಲಯದ ಅಧ್ಯಕ್ಷ ನಾಗೇಶ್, ದೈ.ಶಿ.ಶಿ.ಸಂಘದ ವಲಯಾಧ್ಯಕ್ಷ ನವೀನ್ ಪುತ್ರನ್, ದೈ.ಶಿ.ಶಿ.ಸಂಘದ ಜಿಲ್ಲಾ ಖಜಾಂಜಿ ವಿನ್ನಿಫ್ರೆಡ್ ಗ್ರೇಸಿ ಪಿಂಟೋ, ಜ್ಯೋತಿನಗರ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್ವರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಮಾರ್ಗರೇಟ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಅನಿತಾ ಸಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು. ಆಶಾ ವಂದಿಸಿದರು.
ನಂತರ ವಿದ್ಯಾರ್ಥಿಗಳಿಂದ ಯೋಗ ಸ್ಪರ್ಧೆ ನಡೆಯಿತು.
0 Comments